ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ.17ರಂದು ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆ

|
Google Oneindia Kannada News

ಮೈಸೂರು, ನವೆಂಬರ್ 07 : ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಮುಹೂರ್ತ ನಿಗದಿಯಾಗಿದೆ. ಸೆಪ್ಟೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಈಗ ಮೇಯರ್ ಆಯ್ಕೆ ನಡೆಯಲಿದೆ.

ನವೆಂಬರ್ 17ರಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ನಡೆಯಲಿದೆ. ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ಯಾರು ಮೇಯರ್ ಆಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮೂರು ಮಹಾನಗರ ಪಾಲಿಕೆಗಳಿಗೆ ಇನ್ನೂ ಹೊಸ ಮೇಯರ್ ಸಿಕ್ಕಿಲ್ಲಮೂರು ಮಹಾನಗರ ಪಾಲಿಕೆಗಳಿಗೆ ಇನ್ನೂ ಹೊಸ ಮೇಯರ್ ಸಿಕ್ಕಿಲ್ಲ

ಮೈಸೂರು ಮಹಾನಗರ ಪಾಲಿಕೆಯಲ್ಲಿ 65 ವಾರ್ಡ್‌ಗಳಿವೆ. ಬಹುಮತ ಪಡೆಯಲು 33 ಸ್ಥಾನಗಳು ಅಗತ್ಯ. ಆದರೆ, ಚುನಾವಣೆಯಲ್ಲಿ ಬಿಜೆಪಿ 22, ಕಾಂಗ್ರೆಸ್‌ 19, ಜೆಡಿಎಸ್‌ 18, ಬಿಎಸ್‌ಪಿ 1 ಮತ್ತು 5 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ : ಯಾವ ಪಕ್ಷಕ್ಕೆ ಎಷ್ಟು ಸೀಟು?ಸ್ಥಳೀಯ ಸಂಸ್ಥೆ ಚುನಾವಣೆ : ಯಾವ ಪಕ್ಷಕ್ಕೆ ಎಷ್ಟು ಸೀಟು?

Mysuru city corporation Mayoral elections on November 17

ಕಾಂಗ್ರೆಸ್‌ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಪಾಲಿಕೆ ಅಧಿಕಾರ ಹಿಡಿಯಲಿವೆ. ಆದರೆ, ಮೇಯರ್ ಪಟ್ಟ ಯಾರಿಗೆ?, ಉಪ ಮೇಯರ್ ಯಾರು? ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಕಾಂಗ್ರೆಸ್‌ ಮೇಯರ್ ಪಟ್ಟ ಬೇಕು ಎಂದು ಪಟ್ಟು ಹಿಡಿದಿದೆ.

ಸ್ಥಳೀಯ ಸಂಸ್ಥೆ ಫಲಿತಾಂಶ : ಯಾವ ಪಕ್ಷದ ಹಿಡಿತ ಎಷ್ಟು?ಸ್ಥಳೀಯ ಸಂಸ್ಥೆ ಫಲಿತಾಂಶ : ಯಾವ ಪಕ್ಷದ ಹಿಡಿತ ಎಷ್ಟು?

ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪ ಮೇಯರ್ ಸ್ಥಾನ ಬಿಸಿಎಗೆ ಮೀಸಲಾಗಿದೆ. ಕಾಂಗ್ರೆಸ್ ಪಕ್ಷವೇ ಹೆಚ್ಚಿನ ಸ್ಥಾನದಲ್ಲಿ ಜಯಗಳಿಸಿದೆ. ಆದ್ದರಿಂದ, ಕಾಂಗ್ರೆಸ್ ಮೇಯರ್ ಪಟ್ಟಕ್ಕಾಗಿ ಬೇಡಿಕೆ ಇಟ್ಟಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಮೇಯರ್ ಪಟ್ಟ ಪಕ್ಷಕ್ಕೆ ಬೇಕು ಎಂದು ಹೇಳಿದ್ದಾರೆ.

'ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಪಾಲಿಕೆಯಲ್ಲಿ ಅಧಿಕಾರ ಹಿಡಿಯುತ್ತೇವೆ. ಐದೂ ವರ್ಷ ಮೇಯರ್ ಸ್ಥಾನವನ್ನು ಜೆಡಿಎಸ್ ಇಟ್ಟುಕೊಳ್ಳಲಿದೆ' ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದರು.

English summary
To elect new Mayor and Deputy mayor for the Mysuru city corporation election will be held on November 17, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X