ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬದ ಸಂಭ್ರಮ ಹೆಚ್ಚಿಸಲಿ

Posted By:
Subscribe to Oneindia Kannada

ಮೈಸೂರು, ಆಗಸ್ಟ್ 17: ಪರಿಸರ ಮಾಲಿನ್ಯವನ್ನು ಹತೋಟಿಯಲ್ಲಿಡುವ ದೃಷ್ಟಿಯಿಂದ ಪರಿಸರ ಸ್ನೇಹಿ ಗೌರಿ-ಗಣೇಶನನ್ನು ಪೂಜಿಸಲು ಜಿಲ್ಲಾಧಿಕಾರಿ ಡಿ.ರಂದೀಪ್ ಆದೇಶ ಹೊರಡಿಸಿದ್ದು, ಗುರುವಾರ ಈ ಕುರಿತು ಜಾಗೃತಿ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.

ರಾಜ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ ನಿರ್ಮಿಸಲಾದ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿ ಡಿ.ರಂದೀಪ್ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, 'ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣದ ಗೌರಿ ಗಣೇಶ ವಿಗ್ರಹಗಳ ಬಳಕೆ ಬೇಡ ಈ ಕುರಿತು ಜನರಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಅವಡಿಸಲಾಗುವುದು. ಶಾಲೆಗಳಲ್ಲಿಯೂ ಈ ಕುರಿತು ಜಾಗೃತಿ ಮೂಡಿಸಲಾಗುವುದು.

Mysuru DC asks people to use eco-friendly Ganesha

ಪ್ಲಾಸ್ಟರ್ ಪ್ಯಾರಿಸ್ ಗಣಪನ ತಡೆಗೆ ವಿಶೇಷ ಪೊಲೀಸ್ ಚೆಕ್ ಪೋಸ್ಟ್ ನಿರ್ಮಿಸಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ಬಣ್ಣದ ಗೌರಿ ಗಣೇಶ ವಿಗ್ರಹಗಳು ಬಳಕೆಯಾಗಿರುವುದು ತಿಳಿದು ಬಂದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Please use eco friendly Ganesh to protect our enivironment, Mysuru Deputy commissioner Randeep requested people. The Ganesha festival will be celebrating in the state on Aug 25th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ