ಕೆ.ಮರೀಗೌಡ ಜಾಮೀನು ಅರ್ಜಿ ವಜಾ, ಜೈಲೇ ಗತಿ

Posted By:
Subscribe to Oneindia Kannada

ಮೈಸೂರು, ಆಗಸ್ಟ್ 08 : ಜಾಮೀನು ಪಡೆಯಲೇಬೇಕೆಂಬ ಕಾಂಗ್ರೆಸ್ ಮುಖಂಡ ಕೆ.ಮರೀಗೌಡ ಅವರ ಪ್ರಯತ್ನ ವಿಫಲವಾಗಿದೆ. ಮೈಸೂರು ಜೆಎಂಎಫ್‌ಸಿ ಕೋರ್ಟ್ ಮರೀಗೌಡ ಜಾಮೀನು ಅರ್ಜಿಯನ್ನು ಸೋಮವಾರ ವಜಾಗೊಳಿಸಿದೆ.

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ, ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಅವರು ಆಗಸ್ಟ್ 3ರಂದು ನಜಾರಾಬಾದ್ ಪೊಲೀಸರ ಮುಂದೆ ಶರಣಾಗಿದ್ದರು. ಅವರನ್ನು ಆಗಸ್ಟ್ 16ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.[ಮರೀಗೌಡ ಶರಣಾಗತಿ, ನ್ಯಾಯಾಂಗ ಬಂಧನ, ಜಾಮೀನಿಗೆ ಅರ್ಜಿ]

ಮರೀಗೌಡ ಅವರ ಪರ ವಕೀಲರು ಆಗಸ್ಟ್ 3ರಂದು ಜೆಎಂಎಫ್‌ಸಿ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು. ಇಂದು ನ್ಯಾಯಾಧೀಶೆ ಜೆ.ದೀಪಾ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.[ಮರೀಗೌಡನ ಬಂಧನಕ್ಕಾಗಿ ಮೈಸೂರಲ್ಲಿ ಹಾರಿತು ಗಾಳಿಪಟ!]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಅವರ ವಿರುದ್ಧ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ನಜರಬಾದ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ವಿರುದ್ಧ ದೂರು ದಾಖಲಾದ ಬಳಿಕ ತಲೆ ಮರೆಸಿಕೊಂಡಿದ್ದ ಅವರು ಒಂದು ತಿಂಗಳ ಬಳಿಕ ಪೊಲೀಸರ ಮುಂದೆ ಬಂದು ಶರಣಾಗಿದ್ದರು....

ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿದ ಆರೋಪ

ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿದ ಆರೋಪ

ಮರೀಗೌಡ ಅವರ ವಿರುದ್ಧ ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿದ ಮತ್ತು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪವಿದೆ. ಜುಲೈ 3ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಮೈಸೂರಿಗೆ ತೆರಳಿದ್ದರು. ಸರ್ಕಾರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳನ್ನು ಜಿಲ್ಲಾಧಿಕಾರಿ ಸಿ.ಶಿಖಾ ಸೇರಿದಂತೆ ಇತರ ಅಧಿಕಾರಿಗಳು ಬರಮಾಡಿಕೊಂಡಿದ್ದರು. ಆಗ ಅಲ್ಲಿಗೆ ಆಗಮಿಸಿದ್ದ ಕೆ.ಮರೀಗೌಡ ಅವರು ಸಿ.ಸಿಖಾ ಅವರನ್ನು ಏಕವಚನದಲ್ಲಿ ನಿಂದಿಸಿದ್ದರು. ಮರೀಗೌಡ ಅವರ ಬೆಂಬಲಿಗರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ, ಕಾರನ್ನು ಅಡ್ಡಗಟ್ಟಿದ್ದರು.

ನಜಾರಾಬಾದ್ ಠಾಣೆಗೆ ದೂರು

ನಜಾರಾಬಾದ್ ಠಾಣೆಗೆ ದೂರು

ಯಾದಗಿರಿ ಉಪ ವಿಭಾಗಾಧಿಕಾರಿಯಾಗಿ ಬಡ್ತಿ ಹೊಂದಿ, ವರ್ಗಾವಣೆಯಾಗಿರುವ ನವೀನ್‌ ಜೋಸೆಫ್‌ ಅವರನ್ನು ಜಿಲ್ಲಾಧಿಕಾರಿಗಳು ಏಕೆ ಕರ್ತವ್ಯದಿಂದ ಬಿಡುಗಡೆ ಮಾಡಿಲ್ಲ? ಎಂದು ಮರೀಗೌಡ ಪ್ರಶ್ನಿಸಿದ್ದರು. ಇದೇ ವಿಚಾರವಾಗಿ ಅವರನ್ನು ನಿಂದಿಸಿದ್ದರು. ಈ ಕುರಿತು ಜಿಲ್ಲಾಧಿಕಾರಿ ಸಿ.ಶಿಖಾ ಅವರು ನಜಾರಾಬಾದ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು.[ಚಿತ್ರ : ಸಿ.ಶಿಖಾ]

ನಿರೀಕ್ಷಣಾ ಜಾಮೀನಿಗಾಗಿ ಪ್ರಯತ್ನ

ನಿರೀಕ್ಷಣಾ ಜಾಮೀನಿಗಾಗಿ ಪ್ರಯತ್ನ

ತಮ್ಮ ವಿರುದ್ಧ ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮರೀಗೌಡ ಅವರು ಮೈಸೂರು ಜೆಎಂಎಫ್‌ಸಿ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಎಲ್ಲಿಯೂ ಅವರಿಗೆ ಜಾಮೀನು ಸಿಕ್ಕಿರಲಿಲ್ಲ.

ಪೊಲೀಸರ ಮುಂದೆ ಶರಣಾಗಿದ್ದರು

ಪೊಲೀಸರ ಮುಂದೆ ಶರಣಾಗಿದ್ದರು

ಎಲ್ಲಿಯೂ ನಿರೀಕ್ಷಣಾ ಜಾಮೀನು ಸಿಗದ ಕಾರಣ ಆಗಸ್ಟ್ 3ರಂದು ನಜಾರಾಬಾದ್ ಪೊಲೀಸರ ಮುಂದೆ ಮರೀಗೌಡ ಶರಣಾಗಿದ್ದರು. ಅವರನ್ನು ಆಗಸ್ಟ್ 14ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿತ್ತು. ಅಂದೇ ಮರೀಗೌಡ ಪರ ವಕೀಲ ಸಿ.ಎಂ.ಜಗದೀಶ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಕಾಂಗ್ರೆಸ್‌ನಿಂದ ಮರೀಗೌಡ ಅಮಾನತು

ಕಾಂಗ್ರೆಸ್‌ನಿಂದ ಮರೀಗೌಡ ಅಮಾನತು

ಜಿಲ್ಲಾಧಿಕಾರಿಯನ್ನು ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಕೆ.ಮರೀಗೌಡನನ್ನು ಕಾಂಗ್ರೆಸ್‌ನಿಂದ ಅಮಾತನು ಮಾಡಲು ನಿರ್ಧರಿಸಲಾಗಿದೆ. 'ಮರೀಗೌಡರನ್ನು ಅಮಾತನು ಮಾಡಲಾಗುತ್ತದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಆದರೆ, ಅಮಾನತು ಆದೇಶವಿನ್ನೂ ಹೊರಬಿದ್ದಿಲ್ಲ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mysuru Judicial magistrate first class (JMFC) court on Monday, August 8, 2016 rejected the bail petition of Congress leader K.Mari Gowda.
Please Wait while comments are loading...