ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಮಹಾರಾಜ ಕಾಲೇಜು ವಿದ್ಯಾರ್ಥಿ ಶವ ಪತ್ತೆ

Subscribe to Oneindia Kannada
   ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಮಹಾರಾಜ ಕಾಲೇಜು ವಿದ್ಯಾರ್ಥಿ ಶವ ಪತ್ತೆ | Oneindia Kannada

   ಮೈಸೂರು, ಅಕ್ಟೋಬರ್ 19: ಮಹಾರಾಜ ಕಾಲೇಜು ವಿದ್ಯಾರ್ಥಿಯ ಶವ ಕೊಳೆತ ಸ್ಥಿತಿಯಲ್ಲಿ ಇಲ್ಲಿನ ಕುಕ್ಕರಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ.

   ಮೃತ ಪಟ್ಟಿರುವ ವ್ಯಕ್ತಿಯನ್ನು ವಿ.ದೀಕ್ಷಿತ್ (21 ವರ್ಷ) ಎಂದು ಗುರುತಿಸಲಾಗಿದ್ದು, ಈತ ಹುಣಸೂರು ನಗರದ ನಿವಾಸಿ ಎಂದು ಪತ್ತೆ ಹಚ್ಚಲಾಗಿದೆ.

   Mysuru: Maharaja College student found dead in Kukkarahalli lake

   ಇಂದು ಬೆಳಿಗ್ಗೆ ಕೆರೆಗೆ ಭೇಟಿ ನೀಡಿದರು ನೀರಿನಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿ ಭದ್ರತಾ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದರು. ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಶವವನ್ನು ಮೇಲೆತ್ತಿದ್ದಾರೆ.

   ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ವಿದ್ಯಾರ್ಥಿ ಕೆರೆಗೆ ಬಿದ್ದು ಎರಡು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕಿಸಲಾಗಿದೆ. ಈ ಸಂಬಂಧ ಇಲ್ಲಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Mysuru: The student was found dead in Kukarahalli lake. The deceased person is identified as V Dixit (21 years), who has been identified as a resident of Hunsur city.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ