ನಂಜನಗೂಡು ಉಪ ಚುನಾವಣೆ: ಕಾಂಗ್ರೆಸಿಗೆ ಕೇಶವಮೂರ್ತಿ ಶಾಕ್

By: ಯಶಸ್ವಿನಿ ಎಂ.ಕೆ
Subscribe to Oneindia Kannada

ಮೈಸೂರು, ಜನವರಿ 23 : ನಂಜನಗೂಡು ಬೈ ಎಲೆಕ್ಷನ್‌ನಲ್ಲಿ ನಾನು ಕಾಂಗ್ರೆಸ್ಸಿನಿಂದ ಸ್ಪರ್ಧೇ ಮಾಡುವುದಿಲ್ಲ ಎಂದು ಕಳಲೆ ಕೇಶವಮೂರ್ತಿ ಸ್ಪಷ್ಟಪಡಿಸಿದ್ದು ಕೈ ನಾಯಕರಿಗೆ ಶಾಕ್ ನೀಡಿದ್ದಾರೆ.

ಕಳಲೆ ಕೇಶವಮೂರ್ತಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗೆ ತೆರೆ ಎಳೆದಿದ್ದು, ಜೆಡಿಎಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ತಮ್ಮ ಮನದಾಳದ ಮಾತನ್ನು ಪಕ್ಷದ ವರಿಷ್ಠರ ಮುಂದೆಯೇ ಹೊರಹಾಕಿದ್ದಾರೆ.

"ನಾನು ಜೆಡಿಎಸ್ ಪಕ್ಷದಿಂದ ಬೆಳೆದು ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದೇನೆ. ಪಕ್ಷದ ವರಿಷ್ಠರು ಹಾಗೂ ಮುಖಂಡರು ಹೇಗೆ ಹೇಳುತ್ತಾರೆ ಹಾಗೆ ನಡೆದುಕೊಳ್ಳುತ್ತೇನೆ. ಚುನಾವಣೆಗೆ ನಿಲ್ಲುವಂತೆ ಇನ್ನು ಕೂಡ ಸೂಚನೆ ನೀಡಲ್ಲವೆಂದು ," ಹೇಳಿದರು.

Nanjangudu Byelection: Congress shocked as Keshavamurthi in JDS camp

ಈಗ ಕಳಲೆ ಕೇಶವಮೂರ್ತಿ ಕಾಂಗ್ರೆಸ್ಸಿನಿಂದ ಕಳಕ್ಕಿಳಿಯುವುದಿಲ್ಲ ಎಂಬುದು ಸ್ಪಷ್ಟವಾಗಿದ್ದು, ಬೇರೆ ಅಭ್ಯರ್ಥಿಗಾಗಿ ನಾಯಕರು ಹುಡುಕಾಟ ಮಾಡಬೇಕಾಗಿದೆ.

ಕಾರ್ಯರ್ತರೆ ಪಕ್ಷದ ಆಸ್ತಿ

ಕಾರ್ಯಕಾರಿಣಿ ಉದ್ದೇಶಿಸಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರೇ ಆಸ್ತಿ ಎಂದು ಅಭಿಪ್ರಾಯಪಟ್ಟರು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರದಲ್ಲಿದೆ ಆದರೆ ಅದಕ್ಕೆ ಸಮರ್ಥವಾದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗುತ್ತಿಲ್ಲ. ಹಲವು ಪ್ರಾಮಾಣಿಕರನ್ನು ಕಾಂಗ್ರೆಸ್ ಹಣದ ಆಮಿಷ ತೋರಿಸಿ ಸೆಳೆಯಲು ಯತ್ನಿಸಿತು. ಆದರೆ ಅದು ಸಾಧ್ಯವಾಗಲಿಲ್ಲ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Kalale Keshavamurthy did not contest from Congress in Nanjangudu byelection.
Please Wait while comments are loading...