ಫೆ.18ರಂದು ಮೈಸೂರಿಗೆ ಬರುತ್ತಾರೆ ಪ್ರಧಾನಿ ಮೋದಿ

By: ಯಶಸ್ವಿನಿ ಎಂ.ಕೆ
Subscribe to Oneindia Kannada

ಮೈಸೂರು, ಫೆಬ್ರವರಿ 15 : ಬಿಜೆಪಿಯಲ್ಲೇ ಮೋಡಿ ಮಾಡಿದ ನಾಯಕ ಪ್ರಧಾನಿ ಮೋದಿ. ಇದೇ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ಫೆ.18ರಂದೇ ನಗರಕ್ಕೆ ಭೇಟಿ ನೀಡಲಿದ್ದಾರೆ. ಮೋದಿ ಆಗಮನಕ್ಕೆ ಮೈಸೂರು ನಗರ ಕೂಡ ಸಂಪೂರ್ಣ ಸಜ್ಜಾಗಿದೆ.

ಈಗಾಗಲೇ ಫೆ.19 ರಂದು ಮೈಸೂರು ಮತ್ತು ಹಾಸನದಲ್ಲಿ ನಾನಾ ಕಾರ್ಯಕ್ರಮ ನಿಗದಿಯಾಗಿದ್ದರೂ, ಒಂದು ದಿನ ಮುಂಚಿತವಾಗಿ ಮೈಸೂರು ನಗರಕ್ಕೆ ಆಗಮಿಸುವರು. ಫೆ.18 ರಂದು ರಾತ್ರಿ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಪ್ರಧಾನಿ, ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತ ಮಹಲ್‌ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮೈಸೂರಿಗೆ ಪ್ರಧಾನಿ ಭೇಟಿ: ಭದ್ರತೆ ಪರಿಶೀಲಿಸಿದ ಎಸ್‌ಪಿಜಿ ತಂಡ

ಫೆ. 19ರಂದು ಬೆಳಗ್ಗೆ 10.30 ಕ್ಕೆ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿಡಿಯೋ ಸಂವಾದ ನಡೆಸಿ, ಮಧ್ಯಾಹ್ನ 12.30 ಕ್ಕೆ ವಿಶೇಷ ಹೆಲಿಕಾಪ್ಟರ್‌ ಮೂಲಕ ಶ್ರವಣಬೆಳಗೊಳಕ್ಕೆ ತೆರಳಿ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

Narendra modi coming to Mysuru at Feb.18th Night

ಸಂಜೆ 4ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಆಯೋಜಿಸಿರುವ ಬೃಹತ್‌ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 4.30ಕ್ಕೆ ವಿಶೇಷ ವಿಮಾನದ ಮೂಲಕ ದಿಲ್ಲಿಗೆ ವಾಪಾಸ್ಸಾಗುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿಂಗಳಲ್ಲಿ ಎರಡು ಬಾರಿ ಅಮಿತ್ ಶಾ ಭೇಟಿ
ಕಳೆದ ತಿಂಗಳು ಜನವರಿ 25ರಂದು ಕರ್ನಾಟಕ ಬಂದ್ ದಿನ ಮೈಸೂರಿಗೆ ಆಗಮಿಸಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ಪಾಲ್ಗೊಂಡಿದ್ದ ಅಮಿತ್ ಶಾ ನಂತರ ಇದೇ ತಿಂಗಳ 25 ಮತ್ತು 26ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗೆ ಆಗಮಿಸಿ ಪಕ್ಷದ ಸಂಘಟನಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.

ಅಂದು ಚಾಮರಾಜನಗರ ಜಿಲ್ಲೆಯ ಪ್ರವಾಸ ಕೈಗೊಂಡು ಪಕ್ಷದ ಮುಖಂಡರು ಕಾರ್ಯಕರ್ತರ ಸಭೆ ನಡೆಸಿ ಪಕ್ಷದ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಯಾವ ರೀತಿ ಸಂಘಟಿಸಬೇಕು ಎಂಬ ಬಗ್ಗೆ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಬಿಜೆಪಿ ಸೇರಲಿರುವ ಪ್ರಮುಖ ಮುಖಂಡರು
ಒಕ್ಕಲಿಗರ ಪ್ರಾಬಲ್ಯವಿರುವ ಹಳೇ ಮೈಸೂರು ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಹಾಗೂ ಹಾಸನ ಜಿಲ್ಲೆಯಲ್ಲಿ ಹಲವು ಮುಖಂಡರು ಚುನಾವಣೆ ಸಂಧರ್ಭದಲ್ಲಿ ಬಿಜೆಪಿಗೆ ಸೇರುವ ಸಾಧ್ಯತೆಯಿದೆ. ಒಟ್ಟಾರೆ ಮೋದಿ ಆಗಮನಕ್ಕೆ ಮೈಸೂರಿನಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Prime Minister Narendra Modi will visit the Mysuru city on February 18th. The city of Mysore is getting ready for Modi's arrival.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ