ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಎಸ್‌ಜಿಎಸ್ ಆಸ್ಪತ್ರೆ ಉದ್ಘಾಟಿಸಿದ ಮೋದಿ

|
Google Oneindia Kannada News

ಮೈಸೂರು, ಜನವರಿ 02 : ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಮೈಸೂರಿಗೆ ಆಗಮಿಸಿದ್ದಾರೆ. ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ ಮೋದಿ ಎಸ್‌ಜಿಎಸ್ ಆಸ್ಪತ್ರೆಯನ್ನು ಉದ್ಘಾಟಿಸಿದರು.

ಶನಿವಾರ ಸಂಜೆ 5.20ರ ಸುಮಾರಿಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ ಮೋದಿ ಅವರು ಗೌರಿ ಶಂಕರ ನಗರದಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ತೆರಳಿದರು. [ಮೋದಿ ಕರ್ನಾಟಕ ಭೇಟಿ : ಕಾರ್ಯಕ್ರಮಗಳೇನು?]

narendra modi

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಎಸ್‌ಜಿಎಸ್ ಆಸ್ಪತ್ರೆಯನ್ನು ಮೋದಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, 'ಸಾಧು ಸಂತರು ಸಮಾಜೋದ್ಧಾರಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ ಎಂದರು. ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದು ಸಂಸತವಾಗಿದೆ. ಮೊದಲ ಬಾರಿಗೆ ಇಲ್ಲಿಗೆ ಅವಕಾಶ ಸಿಕ್ಕಿದೆ' ಎಂದು ಹೇಳಿದರು.

'ದತ್ತ ಪೀಠಕ್ಕೆ ಭೇಟಿ ನೀಡಲು ಅವಕಾಶ ದೊರಕಿರುವುದು ನನ್ನ ಪುಣ್ಯ. ದತ್ತ ಪೀಠದ ಆಚರಣೆ, ಸಂಪ್ರದಾಯಗಳ ಬಗ್ಗೆ ನನಗೆ ತಿಳಿದಿದೆ. ನಾದ ಬ್ರಹ್ಮನ ಉಪಾಸನೆ ಮಾಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ' ಎಂದರು.

ಮೋದಿ ಭಾಷಣದ ವಿಡಿಯೋ ನೋಡಿ...

English summary
Indian Prime Minister Narendra Modi on Saturday evening inaugurated the SGS hospital of Avadhoota Datta Peetam in Mysuru-Nanjangud road. Work of Saints, Rishis has always been for welfare of society said, Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X