ಮೈಸೂರು ಕೋರ್ಟ್ ಸ್ಫೋಟ ಪ್ರಕರಣ, ಅಲ್ ಉಮ್ಮಾ ವಿರುದ್ಧ ಚಾರ್ಜ್ ಶೀಟ್!
ಮೈಸೂರು ಕೋರ್ಟ್ ಆವರಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಬುಧವಾರದಂದು(ಮೇ 24) ಚಾರ್ಜ್ ಶೀಟ್ ದಾಖಲಿಸಿದೆ.
ಮೈಸೂರು, ಮೇ 24: ಮೈಸೂರು ಕೋರ್ಟ್ ಆವರಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಬುಧವಾರದಂದು(ಮೇ 24) ಚಾರ್ಜ್ ಶೀಟ್ ದಾಖಲಿಸಿದೆ. ಬೇಸ್ ಮೂವ್ಮೆಂಟ್ ಅಥವಾ ಅಲ್ ಉಮ್ಮಾ ಸಂಘಟನೆಯ ಸದಸ್ಯರ ಮೇಲೆ ದೋಷಾರೋಪಣ ಹೊರೆಸಿ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಮೈಸೂರಿನ ನ್ಯಾಯಾಲಯ ನ್ಯಾಯಾಲಯದ ಹಿಂಬದಿಯಲ್ಲಿರುವ ಶೌಚಾಲಯದಲ್ಲಿ ಬಾಂಬ್ ಸ್ಫೋಟಗೊಂಡು ಶೌಚಾಲಯದ ಕಿಟಕಿ, ಬಾಗಿಲುಗಳು ಧ್ವಂಸಗೊಂಡಿತ್ತು. ದಕ್ಷಿಣ ಭಾರತದಲ್ಲಿ ಸಕ್ರಿಯವಾಗಿರುವ ಉಗ್ರ ಸಂಘಟನೆ ಅಲ್-ಉಮಾ 'ಬೇಸ್ ಮೂಮೆಂಟ್' ಎಂದು ತನ್ನ ಹೆಸರನ್ನು ಬದಲಾವಣೆ ಮಾಡಿಕೊಂಡಿದೆ. ಈ ಅಲ್-ಉಮಾ ಸಂಘಟನೆ ಅಲ್ ಖೈದಾ ಉಗ್ರ ಸಂಘಟನೆಯ ಒಂದು ಭಾಗವಾಗಿದೆ.

ಚಿತ್ತೂರು ಕೋರ್ಟ್ ಸ್ಫೋಟದ ಹೊಣೆ ಹೊತ್ತುಕೊಂಡು ಬೇಸ್ ಮೂಮೆಂಟ್ ಕಳುಹಿಸಿದ್ದ ಪತ್ರದಲ್ಲಿ ಒಸಮಾ ಬಿನ್ ಲಾಡೆನ್ ಚಿತ್ರವಿತ್ತುಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ಭಾರತದಲ್ಲಿ ಕಾರ್ಯನಿರ್ವಹಣೆ ಮಾಡುವ ಈ ಸಂಘಟನೆಯ ಸದಸ್ಯರು ಬೇಸ್ ಮೂಮೆಂಟ್ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡು, ತನಿಖೆಯ ದಿಕ್ಕು ತಪ್ಪಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಮೈಸೂರು ಸ್ಫೋಟ ಪ್ರಕರಣಕ್ಕೂ ಇತರ ರಾಜ್ಯಗಳ ಸ್ಫೋಟಕ್ಕೂ ಸಾಮ್ಯತೆ ಇರುವುದರಿಂದ ಎನ್ಐಎ ತನಿಖೆ ಕೈಗೆತ್ತಿಕೊಂಡಿತ್ತು.
More From
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications