'ರಾಜು ಕೊಲೆ ಪ್ರಕರಣ, ನ್ಯಾಯಾಂಗ ತನಿಖೆ ಅಗತ್ಯವಿಲ್ಲ'

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮೈಸೂರು, ಮಾರ್ಚ್ 16 : 'ಮೈಸೂರಿನ ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣದ ಹಿಂದೆ ಯಾವುದೇ ಸಂಘಟನೆ ಇದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಯ ಅಗತ್ಯವಿಲ್ಲ' ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.

ಮಂಗಳವಾರ ಮೈಸೂರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ ಅವರು, 'ಯಾವುದೇ ಸಂಘಟನೆ ಪರವಾಗಿಯೂ ಸರ್ಕಾರ ಮೃದು ಧೋರಣೆ ಅನುಸರಿಸುವುದಿಲ್ಲ. ರಾಜು ಅವರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವ ತನಕ ಹತ್ಯೆಗೆ ಕಾರಣವೇನು? ಎಂಬುದು ತಿಳಿಯುವುದಿಲ್ಲ' ಎಂದು ತಿಳಿಸಿದರು. [ಗೃಹ ಸಚಿವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು]

g parameshwara

'ರಾಜು ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದಾರೆ. ಈ ಹತ್ಯೆ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ಅಗತ್ಯವಿಲ್ಲ' ಎಂದು ಪರಮೇಶ್ವರ ಅವರು ಸ್ಪಷ್ಟಪಡಿಸಿದರು. [ಕರ್ನಾಟಕದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ: ಪ್ರತಾಪ್ ಸಿಂಹ]

ಪರಿಹಾರ ವಿತರಣೆ : ಕ್ಯಾತಮಾರನಹಳ್ಳಿಯಲ್ಲಿರುವ ರಾಜು ಅವರ ನಿವಾಸಕ್ಕೆ ಭೇಟಿ ನೀಡಿದ ಪರಮೇಶ್ವರ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು ಮತ್ತು ಸರ್ಕಾರದ ಪರವಾಗಿ 5 ಲಕ್ಷ ರೂ.ಗಳ ಮೊತ್ತದ ಪರಿಹಾರದ ಚೆಕ್‌ ಅನ್ನು ನೀಡಿದರು. [ಚಿತ್ರಗಳು : ಮೈಸೂರಲ್ಲಿ ಪೊಲೀಸರ ಪಥಸಂಚಲನ]

ಮಾರ್ಚ್ 13ರ ಭಾನುವಾರ ಸಂಜೆ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶ್ವಹಿಂದೂಪರಿಷತ್, ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ರಾಜು ಹತ್ಯೆ ಖಂಡಿಸಿ ಸೋಮವಾರ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ವೇಳೆ ಹಿಂಸಾಚಾರ ನಡೆದಿತ್ತು. [ಮೈಸೂರಲ್ಲಿ ರಾಜು ಹತ್ಯೆ : ಯಾರು, ಏನು ಹೇಳಿದರು?]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka home minister Dr.G.Parameshwara on Tuesday said, There was no need for judicial probe on for Vishwa Hindu Parishad (VHP), BJP worker Raju murder case. Raju murdered in Udaygiri police station limits Mysuru on Sunday, March 13, 2016.
Please Wait while comments are loading...