ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೆಟ್‌ ಟುಗೆದರ್ ಹೆಸರಿನಲ್ಲಿ ಮೈಸೂರಿನಲ್ಲಿ ಭರ್ಜರಿ ಬಾಡೂಟ

By ಯಶಸ್ವಿನಿ ಎಂ.ಕೆ
|
Google Oneindia Kannada News

ಮೈಸೂರು, ಫೆಬ್ರವರಿ 12 : ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗುತ್ತಿದ್ದಂತೆ ಮತದಾರರನ್ನು ಸೆಳೆಯಲು ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಭಾನುವಾರ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು.

ಇಲ್ಲಿನ ಆಲಮ್ಮ ಛತ್ರದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ ಮತ್ತು ವಾರ್ಡ್‌ ಸಭೆ ಹೆಸರಿನಲ್ಲಿ ಚಾಮರಾಜ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರೊ.ಕೆ.ಎಸ್‌.ರಂಗಪ್ಪ ಪರವಾಗಿ ಸುಮಾರು 1 ಸಾವಿರ ಮಂದಿಗೆ ಮಟನ್‌ ಕುರ್ಮಾ, ಮಟನ್‌ ಚಾಪ್ಸ್‌, ಚಿಕನ್‌ ಚಾಪ್ಸ್‌, ಚಿಕನ್‌ ಕಬಾಬ್‌ ಸೇರಿದಂತೆ ಭರ್ಜರಿ ಬಾಡೂಟ ಹಾಕಿಸಿದರು.

ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ, ಮಾಜಿ ಮೇಯರ್‌ ಎಂ.ಜೆ.ರವಿಕುಮಾರ್‌, ನಗರಪಾಲಿಕೆ ಸದಸ್ಯರುಗಳಾದ ಶೈಲೇಂದ್ರ, ಬಾಲು, ಆರ್‌.ಲಿಂಗಪ್ಪ ಸೇರಿದಂತೆ ಜೆಡಿಎಸ್‌ನ ಹಲವು ಮುಖಂಡರು ಭಾಗವಹಿಸಿದ್ದರು.

Non veg meal party in Chamaraja constituency from JDS leader

ಪ್ರೊ.ಕೆ.ಎಸ್‌.ರಂಗಪ್ಪ ಮಾತನಾಡಿ, ಇದು ನಾನು ಆಯೋಜಿಸಿದ ಕಾರ್ಯಕ್ರಮವಲ್ಲ. ಅತಿಥಿಯಾಗಿ ಭಾಗವಹಿಸಿದ್ದೆ ಅಷ್ಟೆ. ಇದೊಂದು ಸಣ್ಣ ಕಾರ್ಯಕ್ರಮ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಮನವಿ ಮಾಡಿದರು.

Non veg meal party in Chamaraja constituency from JDS leader

ಎಂ.ಜೆ.ರವಿಕುಮಾರ್‌ ಪ್ರತಿಕ್ರಿಯೆ ನೀಡಿ, "ಮೈಸೂರು ಮಹಾನಗರಪಾಲಿಕೆ ಮೇಯರ್‌ ಆಗಿದ್ದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನನ್ನ ವಾರ್ಡ್‌ ಜನರಿಗೆ ಸಂತೋಷ ಕೂಟ ಏರ್ಪಡಿಸಿದ್ದೇನೆ. ಹಿರಿಯ ನಾಗರಿಕರಿಗೆ ಸನ್ಮಾನ ಮಾಡಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ' ಎಂದು ಸಫಾಯಿ ನೀಡಿದರು.

ಗೆಟ್‌ ಟುಗೆದರ್ ಹೆಸರಲ್ಲಿ ಬಾಡೂಟ ಹಾಕಿಸಿ ಜನರನ್ನು ಸೆಳೆಯುವ ಪ್ರಯತ್ನವಂತೂ ಸ್ಪಷ್ಟವಾಗಿಯೇ ಕಾಣುತಿತ್ತು.

English summary
In the Chamaraja constituency of Mysuru, JDS local leader arranged Non veg meals on Sunday to attract voters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X