ಮೈಸೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಭರ್ಜರಿ ಬಾಡೂಟ

Posted By:
Subscribe to Oneindia Kannada

ಮೈಸೂರು, ಮಾರ್ಚ್ 9 : ಮಲ್ಲಿಗೆ ನಗರಿಯಲ್ಲಿ ಬಾಡೂಟದ ರಾಜಕೀಯ ನಡೆಯುತ್ತಿದೆ. ಕಾರ್ಯಕರ್ತರು ಹಾಗೂ ಮತದಾರರನ್ನು ಆಕರ್ಷಿಸಲು ಬಿಜೆಪಿಯಿದ ಬಾಡೂಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹೌದು, ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರಾದ ಎಲ್. ನಾಗೇಂದ್ರ ಅವರಿಂದ ಈ ಬಾಡೂಟದ ವ್ಯವಸ್ಥೆ ಆಯೋಜನೆಗೊಂಡಿದೆ ಎಂದು ಹೇಳಲಾಗುತ್ತಿದೆ. ಮತದಾರರು ಹಾಗೂ ಕಾರ್ಯಕರ್ತರನ್ನು ಸೆಳೆಯಲು ಬಾಡೂಟದ ಆಮಿಷ ಒಡ್ಡಲಾಗಿದೆ.

ಕೋಲಾರ: ಜೆಡಿಎಸ್ ಟಿಕೆಟ್ ಆಕಾಂಕ್ಷಿಯಿಂದ ಭರ್ಜರಿ ಬಾಡೂಟ

Non veg meals for voters by BJP ticket aspirant

ಆದರೆ, ಟಿಕೆಟ್ ಖಾತ್ರಿಗೂ ಮುನ್ನವೇ ನಾಗೇಂದ್ರ ಈ ಆಮಿಷ ಒಡ್ಡಿದ್ದು, ಈ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರಿ ಟಿಕೆಟ್ ಪಡೆಯುವ ಆಲೋಚನೆಯಲ್ಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

Non veg meals for voters by BJP ticket aspirant

ಆದರೆ, ಚಾಮರಾಜ ಕ್ಷೇತ್ರದಲ್ಲಿ ಟಿಕೆಟ್ ಆಕಾಕ್ಷಿಗಳ ಪಟ್ಟಿ ದೊಡ್ಡದಿದೆ. ಅಭ್ಯರ್ಥಿಯ ಆಯ್ಕೆ ತಲೆನೋವಾಗಿ ಪರಿಣಮಿಸಿದೆ. ಒಟ್ಟಿನಲ್ಲಿ ಚುನಾವಣೆಗೂ ಮುನ್ನವೇ ರಾಜಕೀಯ ಪಕ್ಷಗಳು ಬಾಡೂಟದ ಮೂಲಕ ಮತದಾರರನ್ನು ಸೆಳೆಯುವ ಯತ್ನ ಮಾಡುತ್ತಿವೆ. ಈ ಹಿಂದೆ ಇದೇ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಂಗಪ್ಪ ಅವರಿಂದ ಬಾಡೂಟ ಆಯೋಜನೆ ಮಾಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mysuru Chamaraja constituency BJP ticket aspirant L. Nagendra now in news. Because he arranged non veg meals for voters. Now we can remember JDS candidate for same constituency Rangappa also arranged for non veg meals for voters.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ