ಮೈಸೂರಿನಲ್ಲಿ ವೃದ್ಧೆಯ ಮೇಲೆ ಅತ್ಯಾಚಾರ; ವೃದ್ಧೆ ಸಾವು, ಅರೋಪಿ ಸೆರೆ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಡಿಸೆಂಬರ್ 22 : ವೃದ್ಧೆಯೋಬ್ಬರ ಮೇಲೆ ಅತ್ಯಾಚಾರವೆಸಗಿ ಅವರ ಸಾವಿಗೆ ಕಾರಣನಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮೈಸೂರಿನ ತಿಲಕ್ ನಗರದಲ್ಲಿ ನಡೆದಿದೆ.

ಅತ್ಯಾಚಾರವೆಸಗಿದವವನ್ನು ಕಿರಣ್(38) ಎಂದು ಗುರುತಿಸಲಾಗಿದ್ದು, ಅತ್ಯಾಚಾರಕ್ಕೊಳಗಾಗಿ ಆಘಾತದಿಂದ ಸಾವನ್ನಪ್ಪಿದ ವೃದ್ಧೆ ತುಳಸಮ್ಮ(65) ಎಂದು ಹೇಳಲಾಗಿದೆ.

ಕಿರಣ್ ಡಿಸೆಂಬರ್ 18ರಂದು ರಾತ್ರಿ ತುಳಸಮ್ಮ ಎಂಬವರಿಗೆ ಮದ್ಯ ಕುಡಿಸಿ ಅವರ ಮೇಲೆ ಅತ್ಯಾಚಾರವೆಸಗಿದ್ದ. ಅತ್ಯಾಚಾರದಿಂದ ಆಘಾತಕ್ಕೊಳಗಾದ ತುಳಸಮ್ಮ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಬುಧವಾರ ಸಾವಿಗೀಡಾಗಿದ್ದಾರೆ.[ವೃದ್ಧೆ ಮೇಲೆ ಅತ್ಯಾಚಾರ: ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು]

Old woman raped, she is died in hospital

ಇದೀಗ ತುಳಸಮ್ಮ ಅವರ ಮಗಳು ಕಿರಣ್ ಮೇಲೆ ಮಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಕಿರಣ್ ನನ್ನು ವಶಕ್ಕೆ ಪಡೆದಿದ್ದಾರೆ. ಕಿರಣ್ ತುಳಸಮ್ಮ ಅವರಿಗೆ ದೂರದ ಸಂಬಂಧಿ ಎಂದು ತಿಳಿದು ಬಂದಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Old woman raped, she died in hospital. Rapist arrested in mysuru.
Please Wait while comments are loading...