ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೆಲುವಿನ ಬಳಿಕವೂ ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಮಾರಾಮಾರಿ

By ಯಶಸ್ವಿನಿ ಎಂ.ಕೆ
|
Google Oneindia Kannada News

ಮೈಸೂರು, ಮೇ 16 : ಜನಾಭಿಮತ ಸಿಕ್ಕು ಚಾಮುಂಡೇಶ್ವರಿಯಲ್ಲಿ ಜಿಟಿಡಿ ಶಾಸಕರಾಗಿ ಆಯ್ಕೆಯಾದರೂ, ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಡರಾತ್ರಿ ಜಟಾಪಟಿ ನಡೆದಿದೆ.

ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ತಕ್ಕಪಾಠ: ಜಿ.ಟಿ. ದೇವೇಗೌಡ ವಿಶ್ವಾಸ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ತಕ್ಕಪಾಠ: ಜಿ.ಟಿ. ದೇವೇಗೌಡ ವಿಶ್ವಾಸ

ಹೈ ವೋಲ್ಟೇಜ್ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೇಗೌಡರ ನಡುವಿನ ಬಲಾಬಲದಲ್ಲಿ ಜಿ.ಟಿ. ದೇವೇಗೌಡ ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಂಧುವಳ್ಳಿ ಗ್ರಾಮದ ಜೆಡಿಎಸ್ ಕಾರ್ಯಕರ್ತರು ಸಂಭ್ರಮ ಪಡುತ್ತಾ ಕುಣಿದು ಕುಪ್ಪಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಕದ ಗ್ರಾಮವಾದ ಜಟ್ಟಿಹುಂಡಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಅಪಮಾನಿಸಿದ್ದಾರೆ ಎನ್ನಲಾಗಿದೆ.

Post election violence in Chamundeshwari

ಇದರಿಂದ ರೊಚ್ಚಿಗೆದ್ದ ಜಟ್ಟಿಹುಂಡಿ ಗ್ರಾಮದ ಕಾರ್ಯಕರ್ತರು ಪ್ರಶ್ನಿಸಲು ಹೋದಾಗ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟ ನಡೆದಿದೆ. ಹೊಡೆದಾಟದಿಂದ ಕಾಂಗ್ರೆಸ್‌‌ನ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದು, ಗಾಯಗೊಂಡಿರುವ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಘಟನೆಯ ವಿಷಯ ತಿಳಿದ ಜಯಪುರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ಸದ್ಯ 2 ಊರಿನಲ್ಲಿಯೂ ಪೊಲೀಸ್ ಸರ್ಪಗಾವಲು ಏರ್ಪಟ್ಟಿದೆ.

English summary
Even after result declared of state assembly elections, bursted violence between Congress and JDS workers in Chamindeshwari constituency in Mysuru last late night and two Congress workers were injured.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X