ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಬರಿಮಲೆ ಅಯ್ಯಪ್ಪ ನೈತಿಕ ಬ್ರಹ್ಮಚಾರಿ, ಹೀಗಾಗಿ ಮಹಿಳೆಯರಿಗೆ ಪ್ರವೇಶವಿಲ್ಲ:ಪ್ರತಾಪ್ ಸಿಂಹ

|
Google Oneindia Kannada News

ಮೈಸೂರು, ಅಕ್ಟೋಬರ್. 18: ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಕೂಡಲೇ ಮರುಪರಿಶೀಲಿಸಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.

ಶಬರಿಮಲೆ ವಿವಾದದ ಬಗ್ಗೆ ಭಾಗವತ್ ವಿಷಾದದ ಪ್ರತಿಕ್ರಿಯೆಶಬರಿಮಲೆ ವಿವಾದದ ಬಗ್ಗೆ ಭಾಗವತ್ ವಿಷಾದದ ಪ್ರತಿಕ್ರಿಯೆ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನ್ಯಾಯಾಲಯಗಳು ಧರ್ಮಗ್ರಂಥ ಆಧಾರಿತ ಮತಗಳ ಕನ್ನಡಕ ಹಾಕಿಕೊಂಡು, ನಂಬಿಕೆ, ವಿಶ್ವಾಸ, ವಿಧಿ-ವಿಧಾನ, ಆಚಾರ-ವಿಚಾರಗಳ ಆಧಾರಿತವಾಗಿರುವಂತಹ ಹಿಂದೂ ಧರ್ಮವನ್ನು ನೋಡಿ ತೀರ್ಪು ಕೊಡಲು ಪ್ರಾರಂಭವಾಗಿರುವುದರಿಂದ ಈ ಸಮಸ್ಯೆ ಆರಂಭವಾಗಿದೆ.

 ಶಬರಿಮಲೆಯಲ್ಲಿ ಭುಗಿಲೆದ್ದ ಆಕ್ರೋಶ: ಇಂದು ಕೇರಳದಲ್ಲಿ ಮುಷ್ಕರ ಶಬರಿಮಲೆಯಲ್ಲಿ ಭುಗಿಲೆದ್ದ ಆಕ್ರೋಶ: ಇಂದು ಕೇರಳದಲ್ಲಿ ಮುಷ್ಕರ

ಒಂದೇ ಧರ್ಮದ ಗ್ರಂಥದಲ್ಲಿ ಅವರು ನಂಬಿಕೆ ಇಟ್ಟುಕೊಂಡಿದ್ದಾರೆ. ಭಾರತದಲ್ಲಿ ಅಥವಾ ಮೆಕ್ಕಾದಲ್ಲಿದ್ದರೂ ಅದೇ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಆದರೆ, ಹಿಂದೂ ಧರ್ಮ ಹಾಗಲ್ಲ. ಈ ಧರ್ಮಕ್ಕೆ ಯಾರು ಪ್ರವಾದಿ ಇಲ್ಲ. ವಿಶ್ವಾಸ, ಆಚಾರ,-ವಿಚಾರ ಪರಂಪರಗತವಾಗಿ ನಡೆದುಕೊಂಡ ಬಂದಂತಹ ಒಂದು ಪದ್ಧತಿಗಳಲ್ಲಿ ಹಿಂದೂ ಧರ್ಮವಿದೆ.

Pratap Simha has spoken about the entry of women to Sabarimala

ಇದನ್ನು ಅರ್ಥ ಮಾಡಿಕೊಳ್ಳದೆ ಸುಪ್ರೀಂಕೋರ್ಟ್ ಈ ರೀತಿ ತೀರ್ಪು ಕೊಟ್ಟಿರುವುದು ಬಹಳ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ ಎಂದರು.

 ಶಬರಿಮಲೆ ಸುತ್ತ ನಾಲ್ಕು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ ಶಬರಿಮಲೆ ಸುತ್ತ ನಾಲ್ಕು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ

ಸಮಾನತೆ ಹಿಂದೂ ಧರ್ಮದಲ್ಲಿ ಹಾಸುಹೊಕ್ಕಾಗಿದೆ. ಶಬರಿಮಲೆಗೆ ಮಹಿಳೆಯರ ಪ್ರವೇಶದಿಂದ ಅದು ಸಾಬೀತಾಗಬೇಕಿಲ್ಲ. ಶಬರಿಮಲೆ ಅಯ್ಯಪ್ಪ ನೈತಿಕ ಬ್ರಹ್ಮಚಾರಿ. ಹೀಗಾಗಿ ಮಹಿಳೆಯರಿಗೆ ಪ್ರವೇಶ ಇಲ್ಲ ಅಷ್ಟೆ. 10 ವರ್ಷದೊಳಗೆ 50 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪ್ರವೇಶಾವಕಾಶವಿದೆ. ಇದರಲ್ಲಿ ಸಮಾನತೆಯ ಪ್ರಶ್ನೆಯೇ ಇಲ್ಲ ಎಂದು ಕಿಡಿಕಾರಿದರು.

English summary
MP Pratap Simha has spoken about the entry of women to Sabarimala temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X