ರಾಮದಾಸ್ ಅವರೇ ನನ್ನ ಗಂಡ ಎಂದ ಪ್ರೇಮಕುಮಾರಿ!
ಮೈಸೂರು, ಫೆ. 5 : ನಾನು ಮಾಜಿ ಸಚಿವ ಎಸ್.ಎ. ರಾಮದಾಸ್ ಅವರನ್ನು ಪತಿಯಾಗಿ ಸ್ವೀಕರಿಸಿದ್ದು, ಅವರೊಡನೆ ಬಾಳಬೇಕೆಂದು ಹೋರಾಟ ನಡೆಸುತ್ತಿರುವುದು ತಪ್ಪೇ? ನನಗೇಕೆ ಈ ರೀತಿ ತೊಂದರೆ ನೀಡಲಾಗುತ್ತಿದೆ? ಎಂದು ಪ್ರೇಮಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.
ಮೈಸೂರಿನ ಪತ್ರಿಕಾಭವನದಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅಳಲು ತೋಡಿಕೊಂಡ ಪ್ರೇಮಕುಮಾರಿ, ಸರ್ಕಾರದಿಂದ ನನಗೆ ಅನ್ಯಾಯವಾಗುತ್ತಿದೆ, ರಾಜೀನಾಮೆಯನ್ನೂ ಸ್ವೀಕರಿಸುತ್ತಿಲ್ಲ, ಸಂಬಳವನ್ನೂ ನೀಡುತ್ತಿಲ್ಲ. ನನಗೆ ನ್ಯಾಯ ಕೊಡಿಸಿ ಎಂದು ಗೋಳು ತೋಡಿಕೊಂಡರು.
ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ 3 ತಿಂಗಳಾದರೂ ಅದನ್ನು ಅಂಗೀಕರಿಸಿಲ್ಲ. ಅಷ್ಟೇ ಅಲ್ಲದೆ ನನಗೆ ಸರ್ಕಾರ ಯಾವುದೇ ಸವಲತ್ತುಗಳನ್ನು ನೀಡದೆ ಮಾನಸಿಕವಾಗಿ ಕಿರುಕುಳ ನೀಡುತ್ತಿದೆ. ನಾನು ರಾಮದಾಸ್ರೊಂದಿಗೆ ಬಾಳ್ವೆ ನಡೆಸಲು ಹೋರಾಟ ಮಾಡುತ್ತಿದ್ದು, ಪ್ರಾರಂಭದಿಂದಲೂ ನನಗೆ ತುಂಬಾ ಅನ್ಯಾಯವಾಗುತ್ತಿದೆ. ದ್ವಿತೀಯ ದರ್ಜೆ ಗುಮಾಸ್ತೆಯಾಗಿರುವ ತನ್ನನ್ನು ಹಲವು ಬಾರಿ ವರ್ಗಾವಣೆ ಮಾಡಿದ್ದಲ್ಲದೆ, ಎಂಟು ತಿಂಗಳಿನಿಂದ ಯಾವುದೇ ವೇತನ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದರು. ['ಪ್ರೇಮಾ' ಪುರಾಣ ಬಯಲು]

ವೇತನದ ಕುರಿತು ತುಮಕೂರು ಕಚೇರಿಯಲ್ಲಿ ವಿಚಾರಿಸಿದರೂ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಿಎಂ ಸಮ್ಮುಖದಲ್ಲೇ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರೂ, ಸಮಸ್ಯೆ ಏನೆಂದು ಕೇಳುವ ಸೌಜನ್ಯ ತೋರಲಿಲ್ಲ. ಇದರಿಂದ ಬೇಸತ್ತು ಮೂರು ತಿಂಗಳ ಹಿಂದೆ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದು, ಇದನ್ನು ಅಂಗೀಕರಿಸದೆ ಕಡತವನ್ನು ವಿಲೇವಾರಿ ಮಾಡಿಲ್ಲ. ಬದಲಿಗೆ ನೋಟೀಸ್ ಜಾರಿ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನಾನು ಎಂಟು ತಿಂಗಳಿನಿಂದ ವೇತನವಿಲ್ಲದೆ ತೊಂದರೆ ಅನುಭವಿಸುತ್ತಿದ್ದೇನೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ ಎಂದು ಅಳಲು ತೋಡಿಕೊಂಡರು. [ರಾಮದಾಸ್ ಆತ್ಮಹತ್ಯೆಗೆ ಯತ್ನ]
ಮಾಜಿ ಸಚಿವ ಎಸ್.ಎ. ರಾಮದಾಸ್ ಜತೆ ನನ್ನ ಹೆಸರು ಬೆರೆತುಹೋಗಿದೆ. ಅವರೇ ನನ್ನ ಗಂಡ. ನಮ್ಮಿಬ್ಬರನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಅವರು ಯಾವುದೇ ಸಮಯದಲ್ಲಿ ನನ್ನ ಮನೆಗೆ ಬರಬಹುದು ಎಂದು ಹೇಳುವ ಮೂಲಕ ಮತ್ತೊಮ್ಮೆ ರಾಮದಾಸ್ ನನ್ನ ಪತಿ ಎಂದು ಹೇಳುವುದನ್ನು ಮರೆಯಲಿಲ್ಲ. [ಪ್ರೇಮಕುಮಾರಿ ಪ್ರಕರಣಕ್ಕೆ ಹೊಸಜೀವ!]
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications