ಮೈಸೂರು, ಜನವರಿ 07: ಮಾಜಿ ಸಚಿವ ಎಸ್ಎ ರಾಮದಾಸ್ ಜತೆಗಿನ ಪ್ರೇಮ ಪ್ರಕರಣದಿಂದ ಬೆಳಕಿಗೆ ಬಂದ ಪ್ರೇಮಕುಮಾರಿ ಅವರು ಭಾನುವಾರದಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷ (ಐ.ಎನ್.ಸಿ.ಪಿ.) ಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಅಯೂಬ್ ಖಾನ್ ಮುಂತಾದವರು ಉಪಸ್ಥಿತರಿದ್ದರು.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರ ಸೇವೆ ಮಾಡಬೇಕು ಎನ್ನುವ ಹಂಬಲದಿಂದ ರಾಜಕೀಯ ಕ್ಷೇತ್ರಕ್ಕೆ ಬರುತ್ತಿದ್ದೇನೆ. ರಾಮದಾಸ್ ಅವರ ಮೇಲಿನ ಹಠದಿಂದಲ್ಲ. ವೈಯಕ್ತಿಕ ಜೀವನವೇ ಬೇರೆ ರಾಜಕೀಯ ಜೀವನವೇ ಬೇರೆ ಎಂದು ಹೇಳಿದರು.
ರಾಮದಾಸ್ ಅವರೇ ನನ್ನ ಗಂಡ ಎಂದ ಪ್ರೇಮಕುಮಾರಿ!
ಮೈಸೂರಿನಿಂದಲೇ ಸ್ಪರ್ಧೆ: ನಾನು ಮೈಸೂರಿನಿಂದಲೇ ಅಸೆಂಬ್ಲಿಗೆ ಸ್ಪರ್ಧಿಸುತ್ತೇನೆ. ಆದರೆ, ಯಾವ ಕ್ಷೇತ್ರ ಎಂಬುದನ್ನು ಪಕ್ಷ ನಿರ್ಧರಿಸಲಿದೆ. ರಾಮದಾಸ್ ಅವರ ವಿರುದ್ಧ ಸ್ಪರ್ಧಿಸಬೇಕು ಎಂಬುದು ರಾಜಕೀಯಕ್ಕೆ ಬಂದಿಲ್ಲ. ಸಮಾಜ ಸೇವೆ ಮಾಡುವುದು ನನ್ನ ಗುರಿ ಎಂದು ಪ್ರೇಮಕುಮಾರಿ ಹೇಳಿದರು.
2018ರ ಚುನಾವಣೆಗೆ ಸ್ಪರ್ಧೆ : ಪ್ರೇಮಕುಮಾರಿ ಸಂದರ್ಶನ
ವಿದ್ಯಾರ್ಥಿ ದೆಸೆಯಲ್ಲೇ ನನಗೆ ರಾಜಕೀಯ ಆಸಕ್ತಿ ಇದೆ. ನಾನು ಬಹಳ ನೊಂದಿರುವ ಹೆಣ್ಣು ಮಗಳು. ನೊಂದವರ ಧ್ವನಿಯಾಗಬೇಕು. ಸರ್ಕಾರಗಳು ಯಾವ ರೀತಿ ಸ್ಪಂದಿಸುತ್ತದೆ ಎಂಬುದನ್ನ ನನ್ನ ಪ್ರಕರಣದಲ್ಲೇ ಸಾಬೀತಾಗಿದೆ. ಹಾಗಾಗಿ ನೊಂದವರ ಪರ ನಿಲ್ಲಬೇಕೆಂಬ ಸದುದ್ದೇಶದಿಂದ ರಾಜಕೀಯ ಪ್ರವೇಶ ಮಾಡಿದ್ದೇನೆ ಎಂದರು.
Oneindia ಬ್ರೇಕಿಂಗ್ ನ್ಯೂಸ್ . ಇಡೀ ದಿನ ತಾಜಾ ಸುದ್ದಿಗಳ ಪಡೆಯಿರ.subscribe to Kannada Oneindia.
ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!