ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ನಿಂದ ಪ್ರೋ. ರಂಗಪ್ಪ ಕಣಕ್ಕೆ

Posted By:
Subscribe to Oneindia Kannada

ಮೈಸೂರು, ನವೆಂಬರ್ 20: ಕುಮಾರಸ್ವಾಮಿ ಅವರು ಜೆಡಿಎಸ್ ಕುಮಾರಪರ್ವ ಹೋದಲೆಲ್ಲ ಕೆಲವೊಂದು ಕ್ಷೇತ್ರಗಳಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಾರೆ.

ಮೈಸೂರು: ನಾನು ರಾಜಕೀಯ ಪ್ರವೇಶಿಸುವುದಿಲ್ಲ, ಪ್ರೊ.ರಂಗಪ್ಪ

ಇದಕ್ಕೆ ಪೂರಕವೆಂಬಂತೆ ಭಾನುವಾರ ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕುಮಾರಪರ್ವ ಯಾತ್ರೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ ಕುಮಾರಸ್ವಾಮಿ ಅವರು ಚಾಮರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದರು.

Prof K S Rangappa Chamaraja assembly candidate declared Kumaraswamy

ಪ್ರೋ. ರಂಗಪ್ಪ ಅವರೇ ಚಾಮರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದರು. ರಾಜಕೀಯ ಪ್ರವೇಶ ಮಾಡುವುದಿಲ್ಲವೆಂದು ಹೇಳಿ ಬಳಿಕ ಜೆಡಿಎಸ್ ಪಕ್ಷಕ್ಕ ಸೇರಿರುವ ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೋ. ಕೆ. ಎಸ್. ರಂಗಪ್ಪ ಮುಂದಿನ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ.

ಜನವರಿ 10ರಂದು ಮೈಸೂರು ವಿಶ್ವವಿದ್ಯಾಲಯ ಉಪಕುಲಪತಿ ಹುದ್ದೆಯಿಂದ ನಿವೃತ್ತಿಗೊಂಡಿದ್ದ ಪ್ರೋ. ರಂಗಪ್ಪ ಜುಲೈ 10ರಂದು ಜೆಡಿಎಸ್ ಗೆ ಸೇರ್ಪಡೆಗೊಂಡರು. ಬಳಿ ಕುಮಾರಸ್ವಾಮಿ ಅವರ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡು ಶತಾಯಗತಾಯಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಒಟ್ಟಿನಲ್ಲಿ ಸ್ವಂತ ಬುದ್ಧಿವಂತಿಕೆ ಹಾಗೂ ಚಾಕಚಕ್ಯತೆಯಿಂದಲೇ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡು ಜೆಡಿಎಸ್ ಗೆ ಸೇರ್ಪಡೆಯಾಗುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶ ಮಾಡಿರುವ ಪ್ರೊ.ಕೆ.ಎಸ್.ರಂಗಪ್ಪ ಅವರನ್ನು ಚಾಮರಾಜ ಕ್ಷೇತ್ರದ ಜನ ಕೈ ಹಿಡಿಯುತ್ತಾರೋ ಅಥವಾ ಕೆಡವುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mysuru University Former Vice-Chancellor K. S Rangappa is the Chamaraja assembly constituency candidate for upcoming election. JDS state president HD Kumaraswamy Has declared in Kumaraparva rally in Chamaraja assembly constituency, Mysuru on Sunday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ