ಮೈಸೂರು: ಮಕ್ಕಳ ರಕ್ಷಣೆಗಾಗಿ ಕಾನೂನು ಅರಿಯಿರಿ, ಜಿಲ್ಲಾಧಿಕಾರಿ

By: ಮೈಸೂರು ಪ್ರತಿನಿಧಿ
Subscribe to Oneindia Kannada
ಮೈಸೂರು, ಫೆಬ್ರವರಿ 16 : ಕೆಟ್ಟ, ಒಳ್ಳೆಯ ಸ್ಪರ್ಶ ಮುಂತಾದ ಕಾರಣಗಳಿಂದ ಮಕ್ಕಳನ್ನು ರಕ್ಷಿಸುದಕ್ಕಾಗಿಯಾದರೂ ಎಲ್ಲರೂ ಕಾನೂನನ್ನು ಅರಿತುಕೊಳ್ಳಬೇಕು ಎಂದು ಮೈಸೂರಿನ ಜಿಲ್ಲಾಧಿಕಾರಿ ರಂದೀಪ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಕ್ಕುಗಳು ಹಾಗೂ ಕಾಯ್ದೆಗಳ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

DC Randeep

ಪ್ರತಿಯೊಬ್ಬರೂ ಕಾನೂನನ್ನು ಅರ್ಥಮಾಡಿಕೊಂಡಾಗ ಮಾತ್ರ ಮಕ್ಕಳನ್ನು ರಕ್ಷಿಸಬಹದು. ಪೋಸ್ಕೋ ಕಾಯ್ದೆ ಜಾರಿಗೆ ಬಂದ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆದರು ವಿಚಾರಣೆ ನಡೆಸುವ ಸಂದರ್ಭದಲ್ಲಿ ಮಗುವಿನ ಹೆಸರನ್ನು ಮತ್ತು ಗುರುತು ಎಲ್ಲಿಯೂ ಹೊರಬರದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತಿದೆ ಎಂದರು.

ಪೊಲೀಸ್ ಅಧಿಕಾರಿಗಳ ಜೊತೆಯಲ್ಲಿ ಸರಕಾರೇತರ ಸಂಸ್ಥೆಯ ಕಾರ್ಯಕರ್ತರು ಹೆಚ್ಚಿನ ತರಬೇತಿ ಪಡೆದರೆ ಕಾಯ್ದೆ ಉತ್ತಮವಾಗಿ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಮದ್ಯಪಾನ ನಿಷೇಧಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಮದ್ಯಪಾನದಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಕೂಡಲೇ ಮದ್ಯಪಾನವನ್ನು ಸಂಪೂರ್ಣ ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಬೇಕಿದೆ ಎಂದು ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿತು.

ವಿಶ್ವ ಸಂಸ್ಥೆಯ ವರದಿ ಪ್ರಕಾರ ಮದ್ಯ ಸೇವನೆಯಿಂದ 24 ಸಾವಿರ ಕೋಟಿ ಹಣ ವ್ಯರ್ಥವಾಗುತ್ತಿದೆ. ಇದರಿಂದ ಸರ್ಕಾರದ ಬೊಕ್ಕಸ ತುಂಬುತ್ತಿದೆ. ಆದರೆ ಅನೇಕ ಬಡ ಕುಟುಂಬಗಳು ಬೀದಿಗೆ ಬೀಳುತ್ತಿವೆ. ಸರ್ಕಾರ ಮದ್ಯಪಾನ ಮಾರಾಟ ಮಳಿಗೆಗಳಿಗೆ ಪರವಾನಗಿ ರದ್ದು ಮಾಡಬೇಕೆಂದು ಆಗ್ರಹಿಸಿದರು.

Protest

ಬಿಹಾರದಲ್ಲಿ ಮದ್ಯಪಾನ ನಿಷೇಧಿಸಿದ ಮಾಡಿದ ಪರಿಣಾಮ ಅಪರಾಧಗಳು ಕಡಿಮೆಯಾಗಿವೆ. ರಾಜ್ಯ ಸರ್ಕಾರವು ಇಂತಹ ಮಾದರಿಯನ್ನು ಅನುಸರಿಸಬೇಕು ಎಂದು ಸಂಸ್ಥೆಯ ಅಧ್ಯಕ್ಷ ಡಾ. ಸುಬ್ರಮಣ್ಯಸ್ವಾಮಿ ಒತ್ತಾಯಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mysuru DC D Randeep said that amendments in the laws concerning the protection and safety of children following the rampant increase in the cases of child abuse and trafficking has made it crystal clear that safety of children was our top priority. still have a complete understanding of the laws.
Please Wait while comments are loading...