ಮೈಸೂರು : ಬಿಎಸ್‌ವೈ ಸೇರಿ ಇತರ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

Posted By:
Subscribe to Oneindia Kannada

ಮೈಸೂರು, ಮಾರ್ಚ್ 17 : ಮೈಸೂರಿನಲ್ಲಿ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಶ್ವಹಿಂದೂ ಪರಿಷತ್ ಮತ್ತು ಬಿಜೆಪಿ ನಾಯಕ ರಾಜು ಕೊಲೆ ಖಂಡಿಸಿ ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ನಗರಕ್ಕೆ ಆಗಮಿಸಿದ್ದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ತೆರಳುತ್ತಿದ್ದ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಎಸ್.ಎ.ರಾಮದಾಸ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ['ರಾಜು ಕೊಲೆ ಪ್ರಕರಣ, ನ್ಯಾಯಾಂಗ ತನಿಖೆ ಅಗತ್ಯವಿಲ್ಲ']

vishwa hindu parishad

ನಾಯಕರನ್ನು ವಶಕ್ಕೆ ಪಡೆಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು. ದೇವರಾಜ್ ಅರಸ್ ಜಂಕ್ಷನ್ ಬಳಿ ಪೊಲೀಸರ ವಾಹನ ತಡೆದು ಧರಣಿ ನಡೆಸಿದ ಕಾರ್ಯಕರ್ತರು, ಪೊಲೀಸರ ಕ್ರಮವನ್ನು ಖಂಡಿಸಿದರು. [ಕರ್ನಾಟಕದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ: ಪ್ರತಾಪ್ ಸಿಂಹ]

ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ ಅವರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಹೋರಾಟ ಮಾಡುತ್ತೇವೆ. ರಾಜು ಹತ್ಯೆಯಂತಹ ಘಟನೆಗಳು ರಾಜ್ಯದಲ್ಲಿ ಮುಂದೆ ನಡೆಯದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದರು.

ಮಾರ್ಚ್ 13ರ ಭಾನುವಾರ ಸಂಜೆ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶ್ವಹಿಂದೂಪರಿಷತ್, ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ರಾಜು ಹತ್ಯೆ ಖಂಡಿಸಿ ಸೋಮವಾರ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ವೇಳೆ ಘರ್ಷಣೆ ನಡೆದಿತ್ತು. [ಮೈಸೂರಲ್ಲಿ ರಾಜು ಹತ್ಯೆ : ಯಾರು, ಏನು ಹೇಳಿದರು?]

ಸೋಮವಾರ ನಡೆದ ಘರ್ಷಣೆ ಬಳಿಕ ನಗರದಲ್ಲಿ ಸೆಕ್ಷನ್ 144 ಅನ್ವಯ ನಿ‍ಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶುಕ್ರವಾರ ಮಧ್ಯರಾತ್ರಿಯ ತನಕ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಮೈಸೂರ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
BJP national vice president and former chief minister B.S.Yeddyurappa and other leaders detained in Mysuru on Thursday while heading towards Deputy Commissioner's Office to protest against the murder of Vishwa Hindu Parishad (VHP), BJP worker Raju. Raju murdered in Udaygiri police station limits on Sunday, March 13, 2016.
Please Wait while comments are loading...