ಮೈಸೂರು: ಶೋಭಾ ಕರಂದ್ಲಾಜೆ, ಬಿಎಸ್ವೈ ಬಂಧನಕ್ಕೆ ಒತ್ತಾಯ

Posted By:
Subscribe to Oneindia Kannada

ಮೈಸೂರು, ಜುಲೈ 17: ಕರಾವಳಿಯಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿರುವ ಶೋಭಾ ಕರಂದ್ಲಾಜೆ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸುಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ದವರು ಉದಯಗಿರಿಯಲ್ಲಿ ಜುಲೈ 17 ರಂದು ಪ್ರತಿಭಟನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಇಬ್ಬರು ಅಮಾಯಕರ ಕೊಲೆ ಹಾಗೂ 12 ಚೂರಿ ಇರಿತ ಪ್ರಕರಣಗಳು ನಡೆದಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಸೆಕ್ಷನ್ 144 ಜಾರಿಯಲ್ಲಿದ್ದರೂ ಸಹ ಶರತ್ ಕೊಲೆಯನ್ನು ಖಂಡಿಸುವ ನೆಪದಲ್ಲಿ ಬಿಜೆಪಿ ಸಂಸದರಾದ ಶೋಭಾ ಮತ್ತು ನಳಿನ್ ಕುಮಾರ್ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿ ವಾತಾವರಣ ಮತ್ತಷ್ಟು ಪ್ರಕ್ಷುಬ್ಧವಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

Protest in Mysuru against Shobha Karndlaje and B S Yeddyurappa

ಪ್ರಕರಣ ತನಿಖೆ ಹಂತದಲ್ಲಿರುವಾಗಲೇ ಬಿಜೆಪಿ ಸಂಸದರು ಕೊಲೆಯ ಆರೋಪವನ್ನು ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಯ ಮೇಲೆ ಹೊರಿಸಲು ಹೊರಟಿರುವುದು ಸರಿಯಲ್ಲ. ಇದು ಪೊಲೀಸರ ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಸೂತಕದ ಮನೆಯಲ್ಲಿ ರಾಜಕೀಯ ಮಾಡುತ್ತಿರುವ ರಾಜಕಾರಣಿಗಳನ್ನು ಕಾನೂನಿನ ಅಡಿಯಲ್ಲಿ ತರುವವರೆಗೂ ಇಲ್ಲಿ ಕೋಮುದ್ವೇಷಗಳು ಕೊನೆಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಲೋಕಸಭಾ ಸಭಾಪತಿಯವರು, ರಾಷ್ಟ್ರೀಯ ಚುನಾವಣಾ ಆಯೋಗ ಶೋಭಾ ಕರಂದ್ಲಾಜೆ, ಯಡಿಯೂರಪ್ಪ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು. ಕೋಮು ಪ್ರಚೋದನೆ ಹಾಗೂ ರಾಜ್ಯದಲ್ಲಿ ಅರಾಜಕತೆಯನ್ನು ಸೃಷ್ಟಿಸುತ್ತಿರುವ ಬಿಜೆಪಿ ಸಂಸದರು, ಶಾಸಕರು, ಸಂಘಪರಿವಾರದ ನಾಯಕರನ್ನು ಜೈಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

Protest in Mysuru against Shobha Karndlaje and B S Yeddyurappa

ಆಸ್ತಿ ಹರಾಜಿಗೆ ಒತ್ತಾಯ
ರಾಜ್ಯ ಪತ್ರದ ಸಂಖ್ಯೆ ಆರ್.ಡಿ.03ಜಿ.ಆರ್.ಸಿ ಪ್ರಕಟಣೆಯಂತೆ ಗ್ರೀನ್ ಬಡ್ಸ್ ಅಗ್ರೋ ಫಾರಂ ಕಂಪನಿಯ ಆಸ್ತಿಗಳನ್ನು ಕೂಡಲೇ ಹರಾಜು ಮಾಡುವ ಪ್ರಕ್ರಿಯೆಗೆ ಮುಂದಾಗಬೇಕೆಂದು ಒತ್ತಾಯಿಸಿ ಗ್ರೀನ್ ಬಡ್ಸ್ ಕಾರ್ಯ ಕರ್ತರು ಹಾಗೂ ಠೇವಣಿದಾರರ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ರೈತ ಮುಖಂಡ ಕುರುಬೂರು ಶಾಂತಕುಮಾರ್ ಮಾತನಾಡಿ ಕಂಪನಿಯವರು ಸಕಾಲಕ್ಕೆ ಹಣ ಕೊಡದ ಕಾರಣ 16ಕ್ಕೂ ಹೆಚ್ಚು ಮಹಿಳೆಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷಾಂತರ ಮುಗ್ಧ ಅಮಾಯಕರು ಠೇವಣಿ ಹೂಡಿ ವಂಚನೆಗೊಳಗಾಗಿದ್ದಾರೆ ಗ್ರೀನ್ ಬಡ್ಸ್ ಗೆ ಸಂಬಂಧಿಸಿದ ಆಸ್ತಿಗಳನ್ನು ಮುಟ್ಟುಗೋಲು ಹಾಕುತ್ತಿರುವುದು ಸಂತೋಷದ ವಿಷಯವಾದರೂ ಕಂಪನಿಗೆ ಸೇರಿದ ಆಸ್ತಿಗಳನ್ನು ಬಹಿರಂಗ ಹರಾಜು ಮಾಡಿ ಠೇವಣಿದಾರರಿಗೆ ಹಣ ವಾಪಸ್ ಕೊಡಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.

Protest in Mysuru against Shobha Karndlaje and B S Yeddyurappa

ವಿಪ್ರೋ ಪುನರಾರಂಭಕ್ಕೆ ಒತ್ತಾಯ

ನಗರದ ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ವಿಪ್ರೋ ಲೈಟಿಂಗ್ ಕಾರ್ಖಾನೆಯನ್ನು ಏಕಾಏಕಿ ಮುಚ್ಚಿದ್ದು, ಕಾರ್ಖಾನೆಯನ್ನು ಪುನರಾರಂಭಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಮಿಕರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸಮಾವೇಶಗೊಂಡ ಕಾರ್ಮಿಕರು, ವಿಪ್ರೋ ಒಡೆತನಕ್ಕೆ ಸೇರಿದ ಲೈಟಿಂಗ್ ಕಾರ್ಖಾನೆಯು 18 ವರ್ಷಗಳಿಂದ ಅಸ್ಥಿತ್ವದಲ್ಲಿದೆ. ಈ ಕಾರ್ಖಾನೆಯಲ್ಲಿ

Shobha Karandlaje has life threat from religious organizations | Oneindia Kannada

ಸುಮಾರು 300 ರಿಂದ 400 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಳೆದ 2 ವರ್ಷಗಳಿಂದ ಕಾರ್ಖಾನೆಯ ಉತ್ಪನ್ನಕ್ಕೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿ ಕಂಪನಿ ನಷ್ಟ ಅನುಭವಿಸುತ್ತಿದೆ ಎಂಬ ಕಾರಣದಿಂದ ಕೆಲ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಈಗ ಏಕಾಏಕಿ ಜು.10 ರಿಂದ ಕಾರ್ಖಾನೆ ಮುಚ್ಚಿ ಕಾರ್ಮಿಕರನ್ನು ಬೀದಿಪಾಲು ಮಾಡಿದ್ದಾರೆ ಎಂದು ಆರೋಪಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Social democratic party of India workers protested against BJP's member of parliament Shobha Karndlaje and BJP's Karnataka state president B S Yeddyurappa, on their reaction against Mangaluru's violence.
Please Wait while comments are loading...