ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡಿದರೆ ಜೈಲೂಟ ಗ್ಯಾರಂಟಿ

By Yashaswini
|
Google Oneindia Kannada News

ಮೈಸೂರು, ಜುಲೈ. 3 : ಸಾರ್ವಜನಿಕರು ಇನ್ನು ಮುಂದೆ ಸಿಕ್ಕ- ಸಿಕ್ಕಲ್ಲಿ ಮೂತ್ರ ವಿಸರ್ಜನೆ ಮಾಡುವಂತಿಲ್ಲ. ಒಂದು ವೇಳೆ ಹಾಗೆ ಮಾಡಿದರೆ, ಅಂತಹವರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಮೈಸೂರು ನಗರಪಾಲಿಕೆ ಸದ್ದಿಲ್ಲದೆ ಆರಂಭಿಸಿದೆ.

ಕಳೆದ ಮಾರ್ಚ್ ತಿಂಗಳಿನಿಂದ ನಗರದಾದ್ಯಂತ ಜನ ನಿಬಿಡ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸುತ್ತಿದ್ದ ಸುಮಾರು 200 ಮಂದಿಗೆ ದಂಡ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡಬಾರದು ಎಂದು ನಗರಪಾಲಿಕೆಯಲ್ಲಿ ನಿಯಮ ರೂಪಿಸಲಾಗಿದೆ.

ಅಕ್ಟೋಬರ್‌ನಲ್ಲಿ ಕಲಬುರಗಿ ಬಯಲು ಶೌಚ ಮುಕ್ತ ಜಿಲ್ಲೆಅಕ್ಟೋಬರ್‌ನಲ್ಲಿ ಕಲಬುರಗಿ ಬಯಲು ಶೌಚ ಮುಕ್ತ ಜಿಲ್ಲೆ

ಆದರೆ, ಅದಕ್ಕೆ ತಲೆಕೆಡಿಸಿಕೊಳ್ಳದ ಜನರು, ಖಾಲಿ ಜಾಗ ಸಿಕ್ಕಲ್ಲಿ ಮೂತ್ರ ವಿಸರ್ಜನೆಗೆ ಮುಂದಾಗುತ್ತಿದ್ದರು. ಈ ಸಂಬಂಧ ಎಷ್ಟು ಬಾರಿ ಎಚ್ಚರಿಕೆ ನೀಡಿದರೂ, ಜನರು ಮಾತ್ರ ಕ್ಯಾರೇ ಎನ್ನುತ್ತಿರಲಿಲ್ಲ.

public is no longer able to get rid of urine in open places

ಇದೀಗ ಸೂಕ್ತ ಕ್ರಮಕ್ಕೆ ಮುಂದಾದ ನಗರ ಪಾಲಿಕೆ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸುವವರಿಗೆ ದಂಡ ವಿಧಿಸಲು ತೀರ್ಮಾನಿಸಿದೆ. ಈ ಕುರಿತು ಅಧಿಕಾರಿಗಳ ಸಭೆ ನಡೆಸಿರುವ ಆಯುಕ್ತ ಎಚ್.ಕೆ.ಜಗದೀಶ್ ಅವರು, ನಗರ ವ್ಯಾಪ್ತಿಯ 9 ವಲಯ ಕಚೇರಿಗಳ ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದ್ದು,

ಜನನಿಬಿಡ ಪ್ರದೇಶದಲ್ಲಿ ಮೂತ್ರ ವಿಸರ್ಜಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ನಗರಪಾಲಿಕೆಯ ಆರೋಗ್ಯಾಧಿಕಾರಿಗಳು, ವಲಯ ಕಚೇರಿಯ ಆರೋಗ್ಯ ಪರಿವೀಕ್ಷಕರು ಹಾಗೂ ಎಲ್ಲ ವಲಯ ಕಚೇರಿಗಳ ಪರಿಸರ ಇಂಜಿನಿಯರುಗಳಿಗೆ ದಂಡ ವಿಧಿಸುವ ಅಧಿಕಾರ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸುವವರಿಗೆ 100 ರೂ, 2ನೇ ಬಾರಿಯಾದರೆ 200 ರೂ. ಹಾಗೂ 3ನೇ ಬಾರಿಯೂ ಸಿಕ್ಕಿಬಿದ್ದರೆ 500 ರೂ. ಹಾಗೂ ಅದಕ್ಕಿಂತಲೂ ಹೆಚ್ಚಿನ ಬಾರಿ ಸಿಕ್ಕಿಬಿದ್ದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ತೀರ್ಮಾನಿಸಲಾಗಿದೆ.

ಈ ಸಂಬಂಧ ಈಗಾಗಲೇ ಕಾರ್ಯಾಚರಣೆ ಆರಂಭಿಸಿರುವ ನಗರಪಾಲಿಕೆ ಅಧಿಕಾರಿಗಳು, ನಗರದ ಲ್ಯಾನ್ಸ್ ಡೌನ್ ಕಟ್ಟಡದ ಹಿಂಭಾಗ, ದೇವರಾಜ ಅರಸು ರಸ್ತೆಯ ಬಳಿ, ಒಲಂಪಿಯಾ ಚಲನಚಿತ್ರಮಂದಿರದ ಬಳಿ, ಗ್ರಾಮಾಂತರ ಬಸ್ ನಿಲ್ದಾಣ, ಒಂಟಿಕೊಪ್ಪಲು, ಎನ್‍ಆರ್ ಮೊಹಲ್ಲಾ ಹೀಗೆ ನಗರದ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸುತ್ತಿದ್ದ ಸುಮಾರು 200 ಜನರಿಗೆ ದಂಡ ವಿಧಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸುವುದರಿಂದ ಪರಿಸರ ಹಾಳಾಗುವುದಲ್ಲದೆ, ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಕಠಿಣ ಕ್ರಮ ಅನಿವಾರ್ಯ.

ಈಗಾಗಲೇ ಕಾರ್ಯಾಚರಣೆ ಆರಂಭವಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಮುಂದುವರಿಸಲಾಗುವುದು ಎಂದು ನಗರಪಾಲಿಕೆ ಆಯುಕ್ತ ಎಚ್.ಕೆ.ಜಗದೀಶ್ ಹೇಳಿದ್ದಾರೆ.

English summary
Public is no longer able to get rid of urine in open places. penal code for such a fine has been initiated by the Mysore municipal council and has been fined 200 people at last March.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X