ಬಾಲಕಿಯ ಮೇಲೆ ಮಾವನಿಂದಲೇ ಅತ್ಯಾಚಾರಕ್ಕೆ ಯತ್ನ

Posted By:
Subscribe to Oneindia Kannada

ಮೈಸೂರು, ಜನವರಿ 31 : ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಮಾವನೇ ಅತ್ಯಾಚಾರ ನಡೆಸಲು ಯತ್ನಿಸಿದ ಘಟನೆ ಹೆಚ್.ಡಿ. ಕೋಟೆ ತಾಲೂಕಿನಲ್ಲಿ ನಡೆದಿದೆ.

ಹೆಚ್.ಡಿ.ಕೋಟೆ ತಾಲೂಕಿನ ಕುಂಟೇರಿಹಾಡಿಯ ಆದಿವಾಸಿ ಕುಟುಂಬಕ್ಕೆ ಸೇರಿದ ಮೂರು ವರ್ಷದ ಬಾಲಕಿಯ ಮೇಲೆ ಮಾವ ದೊಡ್ಡಹೈದ (28) ಎಂಬಾತ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈತ ಬಾಲಕಿಯ ತಂದೆಯ ಅಕ್ಕನ ಗಂಡ ಎಂದು ಪೊಲೀಸರು ತಿಳಿಸಿದ್ದಾರೆ.

Rape attempt on minor in HD Kote

ಮನೆಯ ಬಳಿ ಮಗು ಆಟವಾಡಿಸುತ್ತಿದ್ದ ವೇಳೆ ಕಣ್ಮರೆಯಾಗಿದ್ದ ಯುವಕನನ್ನು ಬಾಲಕಿಯ ಪೋಷಕರು ಹುಡುಕಾಟ ನಡೆಸುತ್ತಿರುವ ವೇಳೆ ಜಮೀನಿನಲ್ಲಿ ಪೋಷಕರನ್ನು ಕಂಡು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಎಚ್.ಡಿ.ಕೋಟೆ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In a shocking event, a relative of minor tried to rape a 3 year old girl when her parents were busy in their routine work. The incident took place in Mysore. Police has arrested the culprit.
Please Wait while comments are loading...