ಮೈಸೂರು ಬಾಲಕನ ಸಾವಿಗೆ ಆರ್ ಬಿಐ ಕಾರಣ : ಎಎಪಿ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮೈಸೂರು, ಏಪ್ರಿಲ್ 17: ಮೈಸೂರಿನಲ್ಲಿ ಬೆಂಕಿಯುಗುಳುತ್ತಿದ್ದ ಭೂಮಿಯಲ್ಲಿ ಬಿದ್ದು ಅಸುನೀಗಿದ ಹರ್ಷಿಲ್ ಸಾವಿಗೆ ಆರ್ ಬಿಐ ಕಾರಣ ಎಂದು ಆಮ್ ಆದ್ಮಿ ಪಕ್ಷ ದೂರಿದೆ!

ಭಾರತೀಯ ರಿಸರ್ವ್ ಬ್ಯಾಂಕ್ ರಾಸಾಯನಿಕ ತ್ಯಾಜ್ಯಗಳನ್ನು ಪಕ್ಕದ ಶಾದನಹಳ್ಳಿ ಗ್ರಾಮದಲ್ಲಿ ಸುರಿದ ಕಾರಣಕ್ಕೇ ಭೂಮಿ ಬೆಂಕಿಯನ್ನುಗುಳುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಎಪಿ ಒತ್ತಾಯಿಸಿದೆ.[ಮೈಸೂರಿನಲ್ಲಿ ಬೆಂಕಿಯುಗುಳುವ ಭೂಮಿ: ಭೂವಿಜ್ಞಾನಿಗಳಿಗೇ ಸವಾಲು!]

RBI is the main reason for the death of a boy in Mysuru fire mystery: AAP

ಪಕ್ಷದ ವಕ್ತಾರ ಶಿವಕುಮಾರ್ ಈ ಬಗ್ಗೆ ಮಾತನಾಡುತ್ತಾ ಇದೇ ಸ್ಥಳದಲ್ಲಿ ಈ ಹಿಂದೆಯೂ ಅನೇಕ ಅವಘಡಗಳು ನಡೆದಿದ್ದು, ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುವ ತನಕ ರಾಜ್ಯ ಸರ್ಕಾರದ ಪರಿಸರ ಮಾಲಿನ್ಯ ಅಧಿಕಾರಿಗಳು ಸ್ಥಳಕ್ಕೆ ಬಂದಿರಲಿಲ್ಲ ಎಂದು ಅದು ಹೇಳಿದೆ.[ಆಶ್ಚರ್ಯ! ಮೈಸೂರಿನಲ್ಲಿ ಕುದಿಯುತ್ತಿರುವ ಭೂಮಿಗೆ ಬಿದ್ದು ಬಾಲಕ ಸಾವು]

ಈ ಅವಘಡಕ್ಕೆ ನೇರ ಕಾರಣವಾದ ಭಾರತೀಯ ರಿಸರ್ವ್ ಬ್ಯಾಂಕ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Reserve Bank of India (RBI) is the main reason for the death of a boy in fire mystery in Mysuru, AAP leader Sivakumar told today in Mysuru.
Please Wait while comments are loading...