ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಸ್ಪರ್ಧೆ?

|
Google Oneindia Kannada News

Recommended Video

Karnataka Elections 2018 : ಮೈಸೂರಿನಿಂದ ಸಿದ್ದರಾಮಯ್ಯರ ವಿರುದ್ಧ ಈ ಬಿಜೆಪಿ ನಾಯಕ ಸ್ಪರ್ಧೆ | Oneindia Kannada

ಮೈಸೂರು, ಮಾರ್ಚ್ 26 : 'ಪಕ್ಷ ಅವಕಾಶ ನೀಡಿದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಲು ನಾನು ಸಿದ್ಧ' ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಮೈಸೂರಿನಲ್ಲಿ ಸೋಮವಾರ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, 'ಸಿದ್ದರಾಮಯ್ಯ ಚಿಕ್ಕಮಗಳೂರಿಗೆ ಬಂದಿದ್ದಾಗ ನನ್ನ ಹೆಸರು ಸಿ.ಟಿ.ರವಿ ಅಲ್ಲ ಲೂಟಿ ರವಿ ಎಂದು ಆರೋಪ ಮಾಡಿದ್ದಾರೆ' ಎಂದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಗೆಲುವಿಗೆ ಅದೆಷ್ಟು ಅಡ್ಡಿಗಳೋ!ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಗೆಲುವಿಗೆ ಅದೆಷ್ಟು ಅಡ್ಡಿಗಳೋ!

'ಯಾರು ಲೂಟಿ ಹೊಡೆದಿದ್ದಾರೆಂದು ಸಾಬೀತು ಮಾಡಲು ಮಾ.26ರಂದು ಚಾಮುಂಡಿ ಬೆಟ್ಟಕ್ಕೆ ಬರುವುದಾಗಿ ಸವಾಲು ಹಾಕಿದ್ದೆ. ಅದರಂತೆ ಇಂದು ಬಂದಿದ್ದೇನೆ. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ' ಎಂದು ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಪ್ರಮಾಣಕ್ಕೆ ಸಿದ್ದರಾಮಯ್ಯಗೆ ಸಿ.ಟಿ.ರವಿ ಆಹ್ವಾನಚಾಮುಂಡಿ ಬೆಟ್ಟದಲ್ಲಿ ಪ್ರಮಾಣಕ್ಕೆ ಸಿದ್ದರಾಮಯ್ಯಗೆ ಸಿ.ಟಿ.ರವಿ ಆಹ್ವಾನ

'ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಪಕ್ಷ ಅವಕಾಶ ನೀಡಿದರೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುತ್ತೇನೆ. ನನ್ನ ಸವಾಲನ್ನು ಸಿದ್ದರಾಮಯ್ಯ ಅವರು ಸ್ವೀಕರಿಸಲಿ' ಎಂದು ಬಹಿರಂಗ ಸವಾಲು ಹಾಕಿದರು.

sidddaramaiah

'ಚಾಮುಂಡಿ ತಾಯಿಯ ಆಣೆಗೂ ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್‌ ಹೈಕಮಾಂಡ್‌ನ ಎಲ್ಲರೂ ಈಗ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ. ಚುನಾವಣೆ ಮಗಿಯಲಿ, ಕಾಂಗ್ರೆಸ್‌ ನವರೇ ಸಿದ್ದರಾಮಯ್ಯ ಮೇಲೆ ಚಪ್ಪಡಿ ಕಲ್ಲು ಎಳೆಯುತ್ತಾರೆ' ಎಂದು ವಾಗ್ದಾಳಿ ನಡೆಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಗೆಲ್ಲುವುದು ಸುಲಭವಲ್ಲ!ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಗೆಲ್ಲುವುದು ಸುಲಭವಲ್ಲ!

ಜೈಲು ಸೇರುವರು : 'ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿಯವರು ಭ್ರಷ್ಟರು ಎಂದು ಭಾಷಣ ಮಾಡುತ್ತಾರೆ. ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಜಾಮೀನು ರದ್ದಾದರೆ ಜೈಲು ಸೇರುವರು' ಎಂದು ಲೇವಡಿ ಮಾಡಿದರು.

'ರಾಹುಲ್ ಗಾಂಧಿ ಅವರು ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳುತ್ತಾರೆ. ಮೈತ್ರಿ ರಾಜಕಾರಣ ಮಾಡುವವರು ಯಾರು? ಎಂದು ಜನರಿಗೆ ಗೊತ್ತು. ಬಿಬಿಎಂಪಿ, ನಂಜನಗೂಡು ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡವರು ಯಾರು?' ಎಂದು ಪ್ರಶ್ನಿಸಿದರು.

English summary
Former minister and BJP Leader C.T.Ravi said that he is ready to contest for Karnataka assembly elections 2018 against Chief Minister Siddaramaiah from Chamundeshwari assembly constituency, Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X