ನಿವೃತ್ತ ಐಎಎಸ್ ಅಧಿಕಾರಿ ಪುತ್ರಿ ಮೇಲೆ ರೇಪ್, ಸಿಐಡಿ ಬಿ ರಿಪೋರ್ಟ್

Posted By:
Subscribe to Oneindia Kannada

ಮೈಸೂರು, ಸೆಪ್ಟೆಂಬರ್ 01 : ನಿವೃತ್ತ ಐಎಎಸ್ ಅಧಿಕಾರಿ ಪುತ್ರಿ ಮೇಲೆ ಪತಿ ಸಹೋದರ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ 'ಬಿ' ರಿಪೋರ್ಟ್ ಸಲ್ಲಿಕೆ ಮಾಡಿದೆ. ಅತ್ಯಾಚಾರ ನಡೆದಿರುವುದಕ್ಕೆ ಯಾವುದೇ ಸಾಕ್ಷಿ ಲಭಿಸಿಲ್ಲ ಎಂದು ಸಿಐಡಿ ಹೇಳಿದೆ.

ಮೈಸೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿಐಡಿ ಬುಧವಾರ 'ಬಿ' ರಿಪೋರ್ಟ್ ಸಲ್ಲಿಕೆ ಮಾಡಿದೆ. ಘಟನೆ ನಡೆದು ಹಲವು ತಿಂಗಳು ಕಳೆದ ಬಳಿಕ ದೂರು ನೀಡಲಾಗಿದೆ. ಅತ್ಯಾಚಾರ ನಡೆದಿರುವುದಕ್ಕೆ ಸಾಕ್ಷಿಗಳಿಲ್ಲ. ಪ್ರಕರಣದಲ್ಲಿ ಹುರುಳಿಲ್ಲ ಎಂದು ಸಿಐಡಿ ನ್ಯಾಯಾಲಯಕ್ಕೆ ತಿಳಿಸಿದೆ.[ನಿವೃತ್ತ ಐಎಎಸ್ ಅಧಿಕಾರಿ ಪುತ್ರಿ ಮೇಲೆ ಅತ್ಯಾಚಾರ, ಸಿಐಡಿ ತನಿಖೆ]

Retired IAS officer daughter rape case : CID files B report

2015ರ ಮೇ ತಿಂಗಳಿನಲ್ಲಿ ಪತಿಯ ಸಹೋದರ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿ ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣ ಮೈಸೂರಿನಲ್ಲಿ ನಡೆದಿದ್ದರಿಂದ ಕೇಸನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು.[ನಿವೃತ್ತ ಐಎಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರ]

ಮೈಸೂರಿನ ವಿವಿ ಪುರಂ ಪೊಲೀಸರು ಪ್ರಕರಣದ ತನಿಖೆಯನ್ನು ಆರಂಭಿಸಿದ್ದರು. ಆದರೆ, ಪ್ರಕರಣದ ಗಂಭೀರತೆ ಅರಿತು ಅಂದಿನ ಮೈಸೂರು ಪೊಲೀಸ್ ಆಯುಕ್ತ ದಯಾನಂದ ಅವರು ಪ್ರಕರಣವನ್ನು ಸಿಐಡಿಗೆ ವಹಿಸಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ನಂತರ ಪ್ರಕರಣದ ಸಿಐಡಿಗೆ ವರ್ಗಾವಣೆಗೊಂಡಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Criminal Investigation Department (CID)filed 'B' (closure) report in retired IAS officer daughter rape case. Karnataka government ordered a CID prob on rape case reported in Mysuru in 2015.
Please Wait while comments are loading...