ಮೈಸೂರು ನಗರದ ಮೂಲ ಸೌಕರ್ಯಕ್ಕಾಗಿ 950 ಕೋಟಿ ರು. : ಸಿಎಂ ಸಿದ್ದರಾಮಯ್ಯ

Posted By:
Subscribe to Oneindia Kannada

ಮೈಸೂರು, ಫೆಬ್ರವರಿ 12: ಸಾಂಸ್ಕೃತಿಕ ನಗರಿ, ಅರಮನೆಗಳ ನಗರಿ ಮುಂತಾದ ಹಲವಾರು ವಿಶೇಷಣೆಗಳನ್ನು ಹೊಂದಿರುವ ಮೈಸೂರು ನಗರದ ಸೌಂದರ್ಯ ಹಾಗೂ ಸ್ವಚ್ಛತೆ ಉಳಿಸಿಕೊಳ್ಳಲು ಹಾಗೂ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಮೈಸೂರಿಗೆ ಒದಗಿಸಲು ಸರ್ಕಾರ ಕಳೆದ ಮೂರೂವರೆ ವರ್ಷಗಳಲ್ಲಿ 950 ಕೋಟಿ ರೂ.ಗಳನ್ನು ಮೈಸೂರು ನಗರಕ್ಕೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಆಯೋಜಿಸಿದ್ದ ಕೃಷ್ಣರಾಜ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕಾಮಗಾರಿ ಶಂಕುಸ್ಥಾಪನೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.['ಬಿಎಸ್ ವೈ ಆರೋಪ ಭೂತದ ಬಾಯಲ್ಲಿ ಭಗವದ್ಗೀತೆ': ಸಿಎಂ]

Rs. 950 Crores sactioned for Mysore city development, says Chief Minister Siddaramaiah

ಮೈಸೂರಿಗೆ ಜಿಲ್ಲಾ ಆಸ್ಪತ್ರೆ ಕಟ್ಟಡ, ಟ್ರಾಮಾ ಸೆಂಟರ್, ಜಯದೇವ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದ್ದೇನೆ. ಮಹಾರಾಣಿ ಕಾಲೇಜಿನಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಾರೆ. ಆ ಕಾಲೇಜಿಗೆ ಹೊಸದಾಗಿ ಕಟ್ಟಡ ಹಾಗೂ ಹಾಸ್ಟೆಲ್ ನಿರ್ಮಾಣ ಮಾಡುತ್ತಿದ್ದೇವೆ. 136 ಹಾಸಿಗೆಯ ಜಯದೇವ ಆಸ್ಪತ್ರೆ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದ್ದು, ಪೂರ್ಣಗೊಂಡ ನಂತರ ಬೆಂಗಳೂರಿನಲ್ಲಿ ಸಿಗುತ್ತಿದ್ದ ವೈದ್ಯಕೀಯ ಸೌಲಭ್ಯ ಮೈಸೂರಿನ ಜನತೆಗೆ ಇಲ್ಲೇ ಸಿಗುತ್ತದೆ ಎಂದು ಹೇಳಿದರು.

ಮೈಸೂರಿಗೆ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಕಳೆದ ವರ್ಷ 500 ಹಾಸಿಗೆಗಳುಳ್ಳ ಜಿಲ್ಲಾ ಆಸ್ಪತ್ರೆಯನ್ನು ಮಂಜೂರು ಮಾಡಿದ್ದೇನೆ. ಇದರ ಜೊತೆಗೆ 700 ಕೋಟಿ ರೂ. ವೆಚ್ಚದಲ್ಲಿ ಸೂಪರ್‍ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಹ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.[1,000 ಕೋಟಿ ಕೊಟ್ಟಿದ್ದು ನಿಜವೇ ಆದರೆ ರಾಜೀನಾಮೆ ನೀಡ್ತೀರಾ? ಸಿಎಂಗೆ ಬಿಎಸ್ ವೈ ಚಾಲೆಂಜ್]

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಅಭಿವೃದ್ಧಿ ಕೈಗೊಳ್ಳಲು 350 ಕೋಟಿ ನೀಡಿದ್ದೇವೆ. ಇರ್ವಿನ್ ರಸ್ತೆ ಅಗಲೀಕರಣಕ್ಕೆ ಅನುದಾನ ನೀಡಲಾಗುವುದು. ಮೈಸೂರಿಗೆ ಎರಡು ಬಾರಿ ಸ್ವಚ್ಛ ನಗರಿ ಗೌರವ ಸಿಗಲು ಜನರ ಸಹಕಾರ ಹಾಗೂ ಪೌರಕಾರ್ಮಿಕರ ಶ್ರಮ ಕಾರಣ. ಎಲ್ಲಾ ಪೌರಕಾರ್ಮಿಕರನ್ನು ಹಂತ ಹಂತವಾಗಿ ಖಾಯಂ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಎಲೆ ತೋಟದ ನಿವಾಸಿಗಳಿಗೆ ಹಕ್ಕು ಪತ್ರ ಸಿಕ್ಕಿಲ್ಲ. ಇದಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಿದ್ದೇನೆ. ಸ್ವಾಧೀನದಲ್ಲಿರುವವರಿಗೆ ಹಕ್ಕು ಪತ್ರ ನೀಡಲು ಕ್ರಮವಹಿಸಲಾಗುವುದು ಎಂದರು.

ಸೂಯಜ್ ಫಾರಂ ನಿಂದ ದುರ್ವಾಸನೆ ಬರುತ್ತಿದೆ. ಇದರ ನಿವಾರಣೆಗಾಗಿ ಮುಂದಿನ ಬಜೆಟ್‍ನಲ್ಲಿ ಅನುದಾನ ಒದಗಿಸಲಾಗುವುದು ಎಂದರು.
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಉಪಸ್ಥಿತರಿದ್ದರು.

ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷರಾಗಿರುವ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಎಂ.ಕೆ. ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಮಹಾಪೌರರಾದ ಎಂ.ಜೆ. ರವಿಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಿ. ಧ್ರುವಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದರಾಜು, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷರಾದ ಹೆಚ್.ಎ. ವೆಂಕಟೇಶ್, ಮಹಾನಗರ ಪಾಲಿಕೆ ಉಪ ಮೇಯರ್ ರತ್ನ ಲಕ್ಷಣ್, ಜಿಲ್ಲಾಧಿಕಾರಿ ಡಿ. ರಂದೀಪ್ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The chief minister of Karnataka, Siddaramaiah said, Rs. 950 Crores has been sanctioned in past three and half years to keep cleenliness and to devolop infrastructure to Mysore city.
Please Wait while comments are loading...