ಲೈಂಗಿಕ ಕಿರುಕುಳ ಆರೋಪ: ಮೈಸೂರಿನಲ್ಲಿ ಶಿಕ್ಷಕನ ಬಂಧನ

Posted By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಅಕ್ಟೋಬರ್ 26 : ಶಾಲೆಯಲ್ಲಿ ಪಾಠ ಹೇಳಿಕೊಡಬೇಕಾದ ಶಿಕ್ಷಕನೇ ಮಕ್ಕಳ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿ ಜೈಲು ಪಾಲಾಗಿರುವ ಘಟನೆ ಮೈಸೂರಿನಲ್ಲಿ ನಿನ್ನೆ ನಡೆದಿದೆ.

ಮೈಸೂರು ಹನಿ ಟ್ರ್ಯಾಪ್ ಪ್ರಕರಣಕ್ಕೆ ಹೊಸ ತಿರುವು: ದೂರು ನೀಡಿದ ಯುವತಿ

ನಗರದ ಕೃಷ್ಣಮೂರ್ತಿ ಪುರಂನಲ್ಲಿರುವ ಭಗಿನಿ ಸೇವಾ ಸಮಾಜದ ಶಾಲೆಯ ಶಿಕ್ಷಕ ಶಿವಣ್ಣಗಿ ಎಂಬಾತನ ವಿರುದ್ಧ ಇಂತಹ ಆರೋಪ ಕೇಳಿ ಬಂದಿದೆ. ಈತ ಶಾಲೆಗೆ ಬರುವ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುವುದು ಪಾಠ ಹೇಳುವ ನೆಪದಲ್ಲಿ ಮೈ ಕೈ ಮುಟ್ಟಿ ಅಶ್ಲೀಲ ಪದಗಳನ್ನು ಬಳಸುತ್ತಿದ್ದ ಎಂದು ಆರೋಪಿಸಲಾಗಿದೆ.

Sexual harassment charges: a teacher arrested in Mysore

ಈತನ ವರ್ತನೆಯಿಂದ ಹೆದರಿದ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ವಿಷಯ ಮುಟ್ಟಿಸಿದಾಗ ಪೋಷಕರು ಶಿಕ್ಷಕನ್ನು ತರಾಟೆ ತೆಗೆದುಕೊಳ್ಳಲು ಶಾಲೆಗೆ ತೆರಳಿ, ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮುದಿ ಶಿಕ್ಷಕನ್ನು ವಶಕ್ಕೆ ಪಡೆದಿರುವ ಜಯಲಕ್ಷ್ಮೀಪುರಂ ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A teacher who was misbehaving with students and sexually harassing them was arrested by the police here in the city on Oct 26th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ