ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಆಯ್ತು ಈಗ ಮೈಸೂರಿನಲ್ಲಿ ಕಳ್ಳತನ! ಬಿಎಸ್ವೈ ಮೇಲೆ ಆರೋಪ

By ಯಶಸ್ವಿನಿ ಎಂ.ಕೆ
|
Google Oneindia Kannada News

ಮೈಸೂರು, ಏಪ್ರಿಲ್ 10 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸೋಲಿನ ರುಚಿ ತೋರಿಸಲಿ ಎಂದು ಶಿಕಾರಿಪುರ ತಾಲೂಕು ಕಪ್ಪನಹಳ್ಳಿ ಕ್ಷೇತ್ರದ ಜಿಪಂ ಸದಸ್ಯ ನರಸಿಂಗನಾಯ್ಕ ಒತ್ತಾಯಿಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಿಕಾರಿಪುರಕ್ಕೆ ಬಂದು ಸ್ಪರ್ಧಿಸುವಂತೆ ಯಡಿಯೂರಪ್ಪ ಅವರು ಸವಾಲು ಹಾಕಿದ್ದಾರೆ. ಯಡಿಯೂರಪ್ಪ ಅವರನ್ನು ಸೋಲಿಸಲು ಮುಖ್ಯಮಂತ್ರಿಯವರು ಬೇಕಿಲ್ಲ. ತಾನೇ ಅವರ ವಿರುದ್ಧ ಸ್ಪರ್ಧೆ ಮಾಡಿದರೆ ಸೋಲಿಸುತ್ತೇನೆ. ಪರಿಶಿಷ್ಟ ಜಾತಿಗೆ ಸೇರಿದ ತಾನು ಕಪ್ಪನಹಳ್ಳಿ ಸಾಮಾನ್ಯ ಕ್ಷೇತ್ರದಿಂದ ಗೆದ್ದು ಬಂದಿದ್ದೇನೆ. ಆದರೂ ಯಡಿಯೂರಪ್ಪ ಅವರ ಸವಾಲು ಸ್ವೀಕರಿಸಿ ಮುಖ್ಯಮಂತ್ರಿಯವರು ಶಿಕಾರಿಪುರ ಕ್ಷೇತ್ರಕ್ಕೆ ಬರುವುದಾದರೆ ಸ್ವಾಗತ ಎಂದು ತಿಳಿಸಿದರು.

ಬಾದಾಮಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ?ಬಾದಾಮಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ?

ಇನ್ನು ಯಡಿಯೂರಪ್ಪ ಅವರು ತಮ್ಮ ಮಗ ವಿಜಯೇಂದ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ವಿರುದ್ಧ ವರುಣಾ ಕ್ಷೇತ್ರದಲ್ಲಿ ಕಣಕ್ಕಿಳಿಸುತ್ತಿದ್ದಾರೆ. ಯಡಿಯೂರಪ್ಪ ಅವರ ಪುತ್ರ ಅನ್ನುವುದನ್ನು ಬಿಟ್ಟರೆ, ವಿಜಯೇಂದ್ರಗೆ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಬೇರಾವ ಅರ್ಹತೆ ಇದೆ ಎಂದು ಪ್ರಶ್ನಿಸಿದರು.

Shikaripura congress leader invites CM Siddaramaiah to contest election in Shikaripura

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮಿತಿಮೀರಿದ ಭ್ರಷ್ಟಾಚಾರದ ಮೂಲಕ ಶಿವಮೊಗ್ಗ ಜಿಲ್ಲೆಗೆ ಅಪಕೀರ್ತಿ ತಂದವರು, ಅಂತಹವರ ಮಗನನ್ನು ಸುಸಂಸ್ಕೃತರ ಜಿಲ್ಲೆ ಎಂದು ಹೆಸರಾಗಿರುವ ಮೈಸೂರಿನ ಜನತೆ ಬೆಂಬಲಿಸಬಾರದು ಎಂದು ಮನವಿ ಮಾಡಿದರು.

English summary
Congress zilla panchayat member from Shikaripura Narasinga naik has invited CM Siddaramaiah to contest from Shikaripura constituency against BJP Leader and former chief minister B S Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X