ಬಿಜೆಪಿಗೆ ನನ್ನನ್ನು ಕಂಡರೆ ಭಯ : ಸಿದ್ದರಾಮಯ್ಯ

Subscribe to Oneindia Kannada

ಮೈಸೂರು, ಅಕ್ಟೋಬರ್ 30: ಬಿಜೆಪಿಯವರು ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಬಿಜೆಪಿಯವರು ನನ್ನನ್ನು ಕಂಡು ಭಯಗೊಂಡಿದ್ದಾರೆ ಮತ್ತು ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಸ್ತೆ ಅಭಿವೃದ್ಧಿ ಅಕ್ರಮ : ಸಿದ್ದು, ಜಾರ್ಜ್ ವಿರುದ್ಧ ದೂರು

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ತಾವು ಗಟ್ಟಿ ನಾಯಕರಾಗಿ ಮೂಡಿ ಬಂದಿರುವುದರಿಂದ ಬಿಜೆಪಿಯವರು ನನ್ನನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.

Siddaramaiah accuses BJP of making 'wild

ಇತ್ತೀಚೆಗೆ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಸರಣಿ ಆರೋಪಗಳನ್ನು ಮಾಡಿತ್ತು. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಈ ಪ್ರತಿಕ್ರಿಯೆ ನೀಡಿದ್ದಾರೆ.

"ಜನರು ನಮ್ಮ ಸರಕಾರ ಮರಳಿ ಅಧಿಕಾರಕ್ಕೆ ಬರಬೇಕು ಎಂದು ಬಯಸಿದ್ದಾರೆ. ಯಾಕೆಂದರೆ ಜನರಿಗೆ ಗೊತ್ತು ಸಿದ್ದರಾಮಯ್ಯ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತಾರೆ ಎಂದು. ನಮ್ಮ ಸರಕಾರ ಆರ್ಥಿಕವಾಗಿ ಹಿಂದುಳಿದವರಿಗೆ, ಮಹಿಳೆಯರಿಗೆ, ರೈತರಿಗೆ, ಅಲ್ಪಸಂಖ್ಯಾತರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ತಂದಿದೆ ಎಂದು ಜನರಗೆ ತಿಳಿದಿದೆ," ಎಂದು ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah today accused the BJP of making "wild" allegations against him and termed it as a "sign of their fear and desperation".

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ