ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈದುಂಬಿದ ಕಬಿನಿಗೆ ಬಾಗಿನ ಅರ್ಪಿಸಿದ ಸಿದ್ದರಾಮಯ್ಯ

|
Google Oneindia Kannada News

ಮೈಸೂರು, ಸೆಪ್ಟೆಂಬರ್ 21 : ಕಾವೇರಿ ಕಣಿವೆಯ ಕಬಿನಿ ಜಲಾಶಯ ಭರ್ತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಕಬಿನಿ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ.

ಗುರುವಾರ ಎಚ್.ಡಿ.ಕೋಟೆಯಲ್ಲಿರುವ ಕಬಿನಿ ಜಲಾಶಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಮೈದುಂಬಿರುವ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಉಮಾಶ್ರೀ ಮುಂತಾದವರು ಉಪಸ್ಥಿತರಿದ್ದರು.

ಕರ್ನಾಟಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ, ಎದೆ ಮಟ್ಟ !ಕರ್ನಾಟಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ, ಎದೆ ಮಟ್ಟ !

 Siddaramaiah offers bagina to Kabini reservoir

ಕಬಿನಿ ಜಲಾಶಯದ ಗರಿಷ್ಠ ಮಟ್ಟ 2284 ಅಡಿ. ಇಂದು ಜಲಾಶಯದಲ್ಲಿ 2283 ಅಡಿ ನೀರು ತುಂಬಿದೆ. 20 ಸಾವಿರ ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ. 15 ಸಾವಿರ ಕ್ಯುಸೆಕ್ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತದೆ.

ಭರ್ತಿಯಾದ ಆಲಮಟ್ಟಿಗೆ ಬಾಗಿನ ಅರ್ಪಿಸಿದ ಸಿದ್ದರಾಮಯ್ಯಭರ್ತಿಯಾದ ಆಲಮಟ್ಟಿಗೆ ಬಾಗಿನ ಅರ್ಪಿಸಿದ ಸಿದ್ದರಾಮಯ್ಯ

ಕೇರಳದ ವೈನಾಡು ಮತ್ತು ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಜಲಾಶಯದಲ್ಲಿ 19.50 ಟಿಎಂಸಿ ನೀರು ಸಂಗ್ರಹವಾಗಲಿದೆ. ಅದರಲ್ಲಿ 16.50 ಟಿಎಂಸಿ ನೀರನ್ನು ಮಾತ್ರ ಬಳಕೆ ಮಾಡಬಹುದಾಗಿದೆ.

4 ವರ್ಷಗಳ ಬಳಿಕ ಕಬಿನಿ ಜಲಾಶಯ ಭರ್ತಿಯಾಗಿದೆ. ಪ್ರತಿವರ್ಷ ಕಬಿನಿ ಜಲಾಶಯದಿಂದ ಬೆಂಗಳೂರು, ಮಂಡ್ಯ, ಮೈಸೂರು ನಗರಗಳಿಗೆ ಕುಡಿಯುವ ಪೂರೈಕೆ ಮಾಡಲು 7.86 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳುತ್ತದೆ.

English summary
Karnataka Chief Minister Siddaramaiah performed puja to the Cauvery by offering bagina to the Kabini reservoir on September 21, 2017. The water level in the reservoir reached 2,283 feet as against the full reservoir level of 2,284 feet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X