ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ವಿವಿಯ ಗೌರವ ಡಾಕ್ಟರೇಟ್ ನಿರಾಕರಿಸಿದ ಸಿದ್ದರಾಮಯ್ಯ

By Manjunatha
|
Google Oneindia Kannada News

ಮೈಸೂರು, ಜನವರಿ 19: ಮೈಸೂರು ವಿಶ್ವವಿದ್ಯಾಲಯವು ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ.

ಮೈಸೂರು ವಿಶ್ವವಿದ್ಯಾಲಯವು ಫೆಬ್ರವರಿ ಎರಡನೇ ವಾರದಲ್ಲಿ ನಡೆದ ಸಮಿತಿ ಸದಸ್ಯರ ಸಭೆಯಲ್ಲಿ ಗೌರವ ಡಾಕ್ಟರೇಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಶೀಫಾರಸ್ಸು ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿಗಳು ಗೌರವ ಡಾಕ್ಟರೇಟ್ ನಿರಾಕರಿಸಿದ್ದು, ನಿರಾಕರಣೆ ಕಾರಣ ತಿಳಿದುಬಂದಿಲ್ಲ.

ಸಭೆಯಲ್ಲಿ ಮುಖ್ಯಮಂತ್ರಿಗಳನ್ನು ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿ, ಇಸ್ರೋ ಅಧ್ಯಕ್ಷ ಡಾ .ಕಿರಣ್ಕುಮಾರ್, ಸಾಲುಮರದ ತಿಮ್ಮಕ್ಕ ಸೇರಿದಂತೆ 10 ಮಂದಿಯ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ.

Siddaramaiah refuses to take honorary doctorate

ಸಿಂಡಿಕೇಟ್ ಸಭೆಯಲ್ಲಿ ಪಸ್ತಾಪಿಸಲಾದ 10 ಜನರ ಹೆಸರುಗಳಲ್ಲಿ ಸಿಂಡಿಕೇಟ್ ಉಪ ಸಮಿತಿ 4 ಹೆಸರುಗಳನ್ನು ಅಂತಿಮಗೊಳಿಸಿ ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಬೇಕಾಗುತ್ತದೆ. ಈ ಮಧ್ಯೆ ಅತಿಥಿ ಉಪನ್ಯಾಸಕರ ನೇಮಕದಲ್ಲಿ ನಡೆದಿರುವ ಅಕ್ರಮವೂ ಸಭೆಯಲ್ಲಿ ಚರ್ಚೆಗೆ ಬಂದಿತು. ಈ ಅಕ್ರಮದ ಬಗ್ಗೆ ಪರಿಶೀಲನೆ ನಡೆಸುವಂತೆ ಸಭೆಯಲ್ಲಿ ಕುಲಪತಿ ಪೊ.ಸಿ.ಬಸವರಾಜು ಅವರು ಕುಲಸಚಿವರಾದ ಡಿ.ಭಾರತಿ ಅವರಿಗೆ ಸೂಚಿಸಿದರು ಎಂದು ತಿಳಿದು ಬಂದಿದೆ.

ಮೈಸೂರು ವಿವಿ ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿದ್ದು, ಅದು ಸಾಕಷ್ಟು ಸಮಾಜಮುಖಿ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್ ನೀಡಿದೆ. ಡಾ.ರಾಜ್‌ಕುಮಾರ್, ದಲೈ ಲಾಮಾ, ಸಚಿನ್ ತೆಂಡೂಲ್ಕರ್, ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ, ಇನ್‌ಫೋಸಿಸ್ ನಾರಾಯಣಮೂರ್ತಿ ಸೇರಿದಂತೆ ಹಲವು ಖ್ಯಾತ ವ್ಯಕ್ತಿಗಳಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿದೆ.

ದೇಶದ ಪ್ರತಿಷ್ಠಿತ ವಿವಿಗಳಲ್ಲಿ ಒಂದಾದ ಮೈಸೂರು ವಿವಿಯ ಡಾಕ್ಟರೇಟ್ ನಿರಾಕರಿಸಿ ಮುಖ್ಯಮಂತ್ರಿಗಳು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೊ ಎಂಬುದನ್ನು ಕಾದು ನೋಡಬೇಕು.

English summary
CM Siddaramaiah refused the honorary doctorate of Mysore University. University decided to give honorary doctorate to Cm Siddaramaiah in yesterday meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X