ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಗೆ ರಾಜೀನಾಮೆ ನೀಡಲು ಶ್ರೀನಿವಾಸ್ ಪ್ರಸಾದ್ ನಿರ್ಧಾರ

|
Google Oneindia Kannada News

ಮೈಸೂರು, ಅಕ್ಟೋಬರ್, 12 : ನಂಜನಗೂಡು ಶಾಸಕ ವಿ.ಶ್ರೀನಿವಾಸ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಇಂದು ಅಧಿಕೃತವಾಗಿ ತಿಳಿಸಿದ್ದಾರೆ. [ಭಿನ್ನಮತೀಯರ 'ರಾಜಕೀಯ'ದಲ್ಲಿ ಏಕಾಂಗಿಯಾದ ಶ್ರೀನಿವಾಸ ಪ್ರಸಾದ್]

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಕ್ಟೋಬರ್ 17ರಂದು ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶ್ರೀನಿವಾಸ್ ಪ್ರಸಾದ್ ನಿರ್ಧಾರ

ಇದುವರೆಗೆ ಯಾವುದೇ ಪಕ್ಷ ಸೇರುವ ಕುರಿತು ತೀರ್ಮಾನ ತೆಗೆದುಕೊಂಡಿಲ್ಲ. ರಾಜ್ಯದ ಬಲಿಷ್ಠ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರೀತಿಯಿಂದ ಆಹ್ವಾನಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಅವರು ಸಚಿವ ಸಂಪುಟ ಪುನರ್ ರಚನೆಯಾದಾಗ ಸಚಿವ ಸ್ಥಾನದ ಕಳೆದುಕೊಂಡು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದರು.

ಖಾತೆ ಕಳೆದುಕೊಂಡಿದ್ದ ಸಮಾನ ಮನಸ್ಕ ಶಾಸಕರ ನೇತೃತ್ವವನ್ನೂ ಸಹ ಅವರು ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಪಕ್ಷ ಬಿಡುವ ಸೂಚನೆಗಳು ಬಂದಿದ್ದವು. ಈಗ ಅವರೇ ಪಕ್ಷ ಬಿಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

English summary
Nanjanagoodu Mla and Congress senior leader decided to resign to his legislator post. previous he served as a revenue minister in cm Siddramaiah cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X