ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವರ ಪುತ್ರ ಸುನಿಲ್ ಬೋಸ್ ವಿಚಾರಣೆ ಮಾ.21ಕ್ಕೆ ಮುಂದೂಡಿಕೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 14 : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಲಂಚ ಪಡೆಯಲು ಪ್ರೇರೇಪಣೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಪುತ್ರ ಸುನಿಲ್ ಬೋಸ್ ವಿಚಾರಣೆಯನ್ನು ಮತ್ತೆ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಮಾರ್ಚ್ 21ಕ್ಕೆ ಮುಂದೂಡಿದೆ.

ಈ ಹಿಂದೆ ಮಾರ್ಚ್ 14ಕ್ಕೆ ಕೋರ್ಟ್ ಗೆ ಹಾಜರಾಗುವಂತೆ ಆದೇಶಿಸಿತ್ತು. ಅದರಂತೆ ಸುನಿಲ್ ಬೋಸ್ ಇಂದು ಮಾರ್ಚ್ 14ರಂದು ನ್ಯಾಯಾಲಯಕ್ಕೆ ಹಾಜರಾದರು. ಆದರೆ, ನ್ಯಾಯಾಲಯ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ.[ಅಕ್ರಮ ಮರಳುಗಾರಿಕೆ: ಕಟಕಟೆಯಲ್ಲಿ ಸಚಿವರ ಪುತ್ರ]

The Mysuru distric court adjourns Sunil Bose bribery case hearing to March 21

ಫೆಬ್ರವರಿ 27ರಂದು ಸುನಿಲ್ ಬೋಸ್ ಖುದ್ದು ಹಾಜರಾಗುವಂತೆ ಈ ಹಿಂದೆಯೇ ನ್ಯಾಯಾಲಯ ಆದೇಶಿಸಿತ್ತು. ಆದರೆ, ದೂರುದಾರ ರಾಜು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮೂರನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಮುಂದೂಡಿತ್ತು.

ಪ್ರಕರಣದಲ್ಲಿ ಸುನಿಲ್ ಬೋಸ್ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ್ದರಿಂದ ಸುನಿಲ್ ಬೋಸ್ ಹೆಸರನ್ನು ಕೈ ಬಿಡುವಂತೆ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಆದರೆ, ಸದರಿ ಪ್ರಕರಣದಲ್ಲಿ ಸುನಿಲ್ ಬೋಸ್ ಹೆಸರು ಕೈಬಿಡಲು ನಿರಾಕರಿಸಿರುವ ನ್ಯಾಯಾಲಯ ಫೆಬ್ರವರಿ 27ರಂದು ಖುದ್ದು ಹಾಜರಾಜಬೇಕೆಂದು ಆದೇಶ ನೀಡಿತ್ತು.

English summary
The district court adjourned the hearing of the case related to bribery involving Minister for PWD H C Mahadevappa's son Sunil Bose, to March 21, despite the presence of all the accused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X