ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಂಗೇರಿದೆ ಕಣ: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

ಇಂದು ಮೈಸೂರಿನ ಪಾಲಿಗೆ ನಾಮಪತ್ರ ಸಲ್ಲಿಕೆ ದಿನ. ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ, ಗುಂಡ್ಲುಪೇಟೆ ಬಿಜೆಪಿ ಅಭ್ಯರ್ಥಿ ನಿರಂಜನ ಕುಮಾರ್ ಏಪ್ರಿಲ್ 9 ರ ಉಪಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 20: ನಂಜನಗೂಡು ಉಪಚುನಾವಣಾ ಕಣ ರಂಗೇರಿದ್ದು ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಮೆರವಣಿಗೆಯ ಮೂಲಕ ಸಾಗಿ ಬಂದು ಚುನಾವಣಾಧಿಕಾರಿ ಜೆ.ಜಗದೀಶ್ ಅವರಿಗೆ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್,ಇಬ್ಬರು ಸೂಚಕರು ಅಭ್ಯರ್ಥಿಯ ಜೊತೆಗಿದ್ದರು. ಇದಕ್ಕೂ ಮುನ್ನ ಅಭ್ಯರ್ಥಿ ಪ್ರಸನ್ನ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರ ಅಭಿಮಾನಿಗಳು, ಬೆಂಬಲಿಗರು ರೋಡ್ ಶೋ ನಡೆಸಿದರು. ಅಭಿಮಾನಿಗಳು ವಿವಿಧ ಗ್ರಾಮದ ಬೂತ್ ಗಳಿಂದ ಬಸ್ ಗಳಲ್ಲಿ ಆಗಮಿಸಿದ್ದರು.

This is nomination filing day for mysuru!

ಕಾಂಗ್ರೆಸ್ ಬಾವುಟಗಳನ್ನ ಹಿಡಿದು ಜೈಕಾರ ಕೂಗಿದರು. ಶಾಸಕ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಸಚಿವ ಯು.ಟಿ ಖಾದರ್ , ಶಾಸಕರಾದ ವಾಸು, ಪುಟ್ಟರಂಗಶೆಟ್ಟಿ, ಸಂಸದ ಧೃವನಾರಾಯಣ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿಧಾನಪರಿಷತ್ತು ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಜೊತೆಯಾದರು. ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ಜನಸಾಗರವೇ ಹರಿದು ಬಂದಿತ್ತು.

ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಸಚಿವ ಶ್ರೀರಾಮುಲು, ಬಿಜೆಪಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಪ್ಪ ಜೊತೆಯಲ್ಲಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

English summary
Kalale Keshavamurthy who is the Congress candidate for Nanjangud by election and Nirajan Kumar, who is the BJP candidate for gundlupet byelection both have filed their nomination today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X