ರಕ್ಷಣೆಗಾಗಿ ಸಿದ್ದರಾಮಯ್ಯಗೆ ಮನವಿ ಮಾಡಿದ ಪ್ರೇಮಕುಮಾರಿ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಮೈಸೂರು, ಏಪ್ರಿಲ್ 30 : ನನಗೆ ಜೀವ ಭಯವಿದ್ದು, ರಕ್ಷಣೆ ನೀಡಬೇಕು ಎಂದು ಪ್ರೇಮ ಕುಮಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ನನ್ನ ತೇಜೋವಧೆ ಮಾಡಲು ರಾಮದಾಸ್ ಮತ್ತು ಅವರ ಬೆಂಬಲಿಗರು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಮಾಡಿದ ಪ್ರೇಮಕುಮಾರಿ ಅವರು, 'ತಮಗೆ ರಕ್ಷಣೆ ನೀಡಬೇಕು ಎಂಬ ಮನವಿ ಪತ್ರ ಸಲ್ಲಿಸಿದರು. ನಾನು ಒಬ್ಬಂಟಿ ಯಾಗಿ ಇರುವ ಕಾರಣ ನನಗೆ ಜೀವಭಯವಿದ್ದು, ಭದ್ರತೆ ನೀಡಬೇಕು' ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. [ರಾಮದಾಸ್ - ಪ್ರೇಮಕುಮಾರಿ ಪ್ರಕರಣಕ್ಕೆ ಹೊಸಜೀವ!]

premakumari

'ನ್ಯಾಯಾಲಯದಲ್ಲಿ ನಾನು ಎರಡು ದೂರು ನೀಡಿದ್ದೇನೆ. ಈಗಾಗಲೇ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯದಲ್ಲಿ ವರದಿ ಸಲ್ಲಿಸಲಾಗಿದೆ. ಆದರೆ, ಈ ನಡುವೆ ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಿ, ಅನ್ಯತಾ ಸುಳ್ಳು ದಾಖಲೆ ಸೃಷ್ಠಿ ಮಾಡಿಸಿದ್ದಾರೆ' ಎಂದು ಅವರು ಮನವಿ ಪತ್ರದಲ್ಲಿ ಹೇಳಿದ್ದಾರೆ. [ರಾಮದಾಸ್ ಕೇಸ್: 'ಪ್ರೇಮಾ' ಪುರಾಣ ಬಯಲು]

'ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಎಸ್.ಎ.ರಾಮದಾಸ್ ಮತ್ತು ಅವರ ಬೆಂಬಲಿಗರು ನನ್ನ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ದೂರು ಕೊಟ್ಟಿದ್ದೇನೆ' ಎಂದು ಪ್ರೇಮಕುಮಾರಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. [ರಾಮದಾಸ್ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ]

2014ರ ಫೆಬ್ರವರಿಯಲ್ಲಿ ರಾಮದಾಸ್ ಮತ್ತು ಪ್ರೇಮಕುಮಾರಿ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರೇಮಕುಮಾರಿ ಅವರು ಮಾಧ್ಯಮದ ಮುಂದೆ ಮಾಜಿ ಸಚಿವ ರಾಮದಾಸ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಹೇಳಿದ್ದರು. ಪ್ರಕರಣ ಬೆಳಕಿಗೆ ಬಂದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದ ರಾಮದಾಸ್ ಅವರನ್ನು ಕುಟುಂಬದವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಮಾಜಿ ಸಚಿವ ರಾಮದಾಸ್ ತನ್ನನ್ನು ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ್ದಾರೆ ಮತ್ತು ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಪ್ರೇಮಕುಮಾರಿ ಅವರು ಫೆ.14ರಂದು ಮೈಸೂರಿನ ಸರಸ್ವತೀಪುರಂ ಠಾಣೆಯಲ್ಲಿ ರಾಮದಾಸ್ ಮತ್ತು ಅವರ ಸಹೋದರ ಶ್ರೀಕಾಂತ್ ದಾಸ್ ವಿರುದ್ಧ ದೂರು ದಾಖಲಿಸಿದ್ದರು. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Premakumari who claims to be the girlfriend of former minister and BJP leader S.A.Ramdas on Friday appealed to Chief Minister Siddaramaiah seeking security. In 2014 Premakumari alleged that former minister Ramdas cheated her after having an affair over the past five years with the assurance of marriage.
Please Wait while comments are loading...