ಮೈಸೂರು : ಮೂವರು ವಿದ್ಯಾರ್ಥಿಗಳ ಬಲಿ ಪಡೆದ ಲಾರಿ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಫೆಬ್ರವರಿ 29 : ಕಾರಿಗೆ ಲಾರಿ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ಸಮೀಪ ನಡೆದಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ವಿದ್ಯಾರ್ಥಿಗಳು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿಗೆ ಸೇರಿದವರು.

ಮೃತಪಟ್ಟವರನ್ನು ಮಡಿಕೇರಿ ನಿವಾಸಿಗಳಾದ ವಿವೇಕ (23), ಸುಬ್ಬಯ್ಯ (22), ಪೂವಯ್ಯ (22) ಎಂದು ಗುರುತಿಸಲಾಗಿದೆ. ಜೀವಿಕ (21), ತಿಮ್ಮಯ್ಯ (21), ವಿನಯ್ (20) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. [ದೇಹ ಎರಡು ತುಂಡಾದರೂ ಕಣ್ಣು ದಾನ ಮಾಡಿ ಬೆಳಕಾದರು]

road accident

ಹಾಕಿ ಪಂದ್ಯಾವಳಿಗೆ ಬಂದಿದ್ದರು : ಶನಿವಾರ ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕಾರಿನಲ್ಲಿ ವಿದ್ಯಾರ್ಥಿಗಳು ಮಡಿಕೇರಿಗೆ ವಾಪಸ್ ತೆರಳುತ್ತಿದ್ದಾಗ, ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಿ.ಎಂ.ರಸ್ತೆಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. [ಅಪಘಾತದಲ್ಲಿ ಮೃತಪಟ್ಟ ಟೆಕ್ಕಿ ದೇಹ ಆಸ್ಪತ್ರೆಗೆ ದಾನ]

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಮುಂಬದಿ ಕುಳಿತಿದ್ದ ವಿವೇಕ, ಸುಬ್ಬಯ್ಯ, ಪೂವಯ್ಯ ಅವರು ಗಂಭೀರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ನಡೆದ ತಕ್ಷಣ ಅದೇ ಮಾರ್ಗವಾಗಿ ವಾಹನದಲ್ಲಿ ಬರುತ್ತಿದ್ದ ಜನರು ಗಾಯಗೊಂಡಿದ್ದ ಜೀವಿಕ, ತಿಮ್ಮಯ್ಯ, ವಿನಯ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರು.

mysuru accident

ಹುಣಸೂರಿನ ಡಿವೈಎಸ್ಪಿ ಹರೀಶ್‍ಪಾಂಡೆ, ಪಿರಿಯಾಪಟ್ಟಣದ ವೃತ್ತ ನಿರೀಕ್ಷಕ ಪ್ರಸನ್ನಕುಮಾರ್, ಬೈಲಕುಪ್ಪೆ ಠಾಣಾಧಿಕಾರಿ ಎಂ.ಮುದ್ದುಮಹದೇವ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಪಘಾತದಿಂದಾಗಿ ಕೆಲ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Three students of Field Marshal K.M. Cariappa College, Madikeri killed in road accident at Periyapatna, Mysuru on February 27, 2015.
Please Wait while comments are loading...