ಪ್ಲಾಸ್ಟಿಕ್ಕಿನಲ್ಲಿ ಸುತ್ತಿ ಎಸೆದಿದ್ದ 2 ತಿಂಗಳ ಕೂಸಿನ ಮೃತದೇಹ ಪತ್ತೆ

By: ಮೈಸೂರು ಪ್ರತಿನಿಧಿ
Subscribe to Oneindia Kannada
ಮೈಸೂರು, ಫೆಬ್ರವರಿ 16: ಎರಡು ತಿಂಗಳ ಗಂಡು ಶಿಶುವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಗವರ್ನಮೆಂಟ್ ಗೆಸ್ಟ್ ಹೌಸ್ ಒಳಗಡೆ ಯಾರೋ ಬಿಸಾಡಿ ಹೋಗಿರುವ ಘಟನೆ ಮೈಸೂರಿನಲ್ಲಿ ಜರುಗಿದೆ.

ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗವರ್ನಮೆಂಟ್ ಗೆಸ್ಟ್ ಹೌಸ್ ನ ಆವರಣದಲ್ಲಿ ಯಾರೋ ಶಿಶುವನ್ನು ಬಿಸಾಡಿ ಹೋಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ನಜರ್ ಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ಮೃತದೇಹವನ್ನು ಕೆ. ಆರ್.ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಯಾರ ಕೃತ್ಯ ಎಸಗಿದ್ದಾರೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

Two-month-old baby found dead in a plastic bag

ಸಿಎಫ್ ಟಿಆರ್ ಐ ಅರಣ್ಯಪ್ರದೇಶದಲ್ಲಿ ಅಗ್ನಿ ಆಕಸ್ಮಿಕ

ಮೈಸೂರು: ಮೈಸೂರು-ಹುಣಸೂರು ರಸ್ತೆಯಲ್ಲಿರುವ ಕೇಂದ್ರೀಯ ಆಹಾರ ಮತ್ತು ತಂತ್ರಜ್ಞಾನ ಸಂಶೋಧನಾ ಸಂಸ್ಥೆಯ ಅರಣ್ಯ ಪ್ರದೇಶದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಹಳೆಯ ಬೆಲೆ ಬಾಳುವ ಮರಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿದೆ.

ಗುರುವಾರ ಮಧ್ಯಾಹ್ನದ ವೇಳೆ ಕೇಂದ್ರೀಯ ಆಹಾರ ಮತ್ತು ತಂತ್ರಜ್ಞಾನ ಸಂಶೋಧನಾ ಸಂಸ್ಥೆಯ ಅರಣ್ಯ ಪ್ರದೇಶದಲ್ಲಿ ಧಗ್ಗನೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಪ್ರದೇಶವನ್ನು ಆಕ್ರಮಿಸಿಕೊಂಡಿತ್ತು. ತಕ್ಷಣ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿವೆ.

Two-month-old baby found dead in a plastic bag

ಸ್ಥಳಕ್ಕಾಗಮಿಸಿದ ಸರಸ್ವತಿಪುರಂ ಅಗ್ನಿಶಾಮಕ ಠಾಣೆಯ ಮೂರು ವಾಹನಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿವೆ. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಸುತ್ತಮುತ್ತಲು ಬೆಂಕಿ ಹರಡದಂತೆ ತಡೆದಿದ್ದಾರೆ. ಕಿಡಿಗೇಡಿಗಳು ಒಣಗಿದ್ದ ತರುಗೆಲೆಗಳ ಮೇಲೆ ಬೆಂಕಿ ಎಸೆದಿರಬಹುದು ಎನ್ನಲಾಗಿದೆ.

ರೋಗದಿಂದ ಬೇಸತ್ತ ವ್ಯಕ್ತಿ ಆತ್ಮಹತ್ಯೆ

ಮೈಸೂರು: ಮೂರ್ಛೆ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಬೇಸತ್ತು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತನನ್ನು ನಂಜನಗೂಡು ತಾಲ್ಲೂಕಿನ ಚಾಮಲಾಪುರಹುಂಡಿ ಗ್ರಾಮದ ನಿವಾಸಿ ಮಣಿಕಂಠ (30) ಎನ್ನಲಾಗಿದೆ. ಗುರುವಾರ ಬೆಳಿಗ್ಗೆ ವಿಷ ಸೇವಿಸಿದ್ದ ಮಣಿಕಂಠನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಣಿಕಂಠ ಸಾವಿಗೀಡಾಗಿದ್ದಾನೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Two-month-old baby found dead in a plastic bag

ಮಾನಸಿಕ ಅಸ್ವಸ್ಥ ನೇಣಿಗೆ ಶರಣು

ಮೈಸೂರು: ಮಾನಸಿಕ ಅಸ್ವಸ್ಥನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತನನ್ನು ಕಲ್ಯಾಣಗಿರಿ ನಿವಾಸಿ ಆರೀಫ್ (45) ಎನ್ನಲಾಗಿದೆ. ಈತ ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಜಿಗುಪ್ಸೆ ಹೊಂದಿದ್ದ ಎನ್ನಲಾಗುತ್ತಿದೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A baby boy of about two-months old has been found dead in a plastic bag at the Government Guest House premises in the city, on Thursday.
Please Wait while comments are loading...