ಮೈಸೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಡಿಸೆಂಬರ್ 16 : ದೇವರಾಜ ಮೊಹಲ್ಲಾದಲ್ಲಿರುವ ನಂಜರಾಜಬಹದ್ದೂರ್ ಛತ್ರದ ಆವರಣದಲ್ಲಿದ್ದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯೊಳಗೆ ಕೊಳೆತ ಸ್ಥಿತಿಯಲ್ಲಿ 25ರಿಂದ 30 ವರ್ಷದ ಅಪರಿಚಿತ ಯುವಕನೊಬ್ಬನ ಶವ ಪತ್ತೆಯಾಗಿದೆ.

ಪ್ರಾಥಮಿಕ ಶಾಲೆಯನ್ನು ಮುಚ್ಚಲ್ಪಟ್ಟಿದ್ದು, 4-5 ದಿನಗಳ ಹಿಂದೆ ಈ ವ್ಯಕ್ತಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಶುಕ್ರವಾರದಂದು ಕೊಳೆತ ವಾಸನೆ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ದೇವರಾಜ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್, ಸಬ್‍-ಇನ್ಸ್ ಪೆಕ್ಟರ್ ಲೇಪಾಕ್ಷ ಸ್ಥಳ ಮಹಜರು ನಡೆಸಿ, ಶವವನ್ನು ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು.[ಕಾಸರಗೋಡು: ನಾಪತ್ತೆಯಾಗಿದ್ದ ಸಹೋದರರಿಬ್ಬರ ಶವ ಬಾವಿಯಲ್ಲಿ ಪತ್ತೆ]

unknown person discovered the decomposing body in mysuru

ಶವ ಕೊಳೆತಿರುವುದರಿಂದ ಗುರುತು ಹಿಡಿಯುವುದು ಕಷ್ಟವಾಗಿದ್ದು, ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿಯು ಪಾನಮತ್ತನಾಗಿ ಬಂದು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ರೈತನ ಮೇಲೆ ಕರಡಿ ದಾಳಿ
ಮೈಸೂರು: ಬೆಳೆ ವೀಕ್ಷಣೆಗೆ ಜಮೀನಿಗೆ ತೆರಳಿದ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ.
ಎಚ್.ಡಿ.ಕೋಟೆ ತಾಲೋಕಿನ ಮೊಸರಳ್ಳ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಅಂಕನಾಯ್ಕ(65) ಕರಡಿ ದಾಳಿಯಿಂದ ಗಾಯಗೊಂಡ ರೈತ.

farmer


ಅವರ ಎರಡು ಕೈಗಳಿಗೆ ತೀವ್ರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Body of a young man found in decomposed condition in the premises of Model Higher Primary School in Devaraja Mohalla area, Mysuru. Local police investigation the matter.
Please Wait while comments are loading...