ಮೈಸೂರಲ್ಲಿ ವಾಟಾಳ್ ಏಕಾಂಗಿ ಪ್ರತಿಭಟನೆ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮೈಸೂರು, ಜನವರಿ 28 : ಮೈಸೂರಿನ ಪ್ರತಿಷ್ಠಿತ ಲಲಿತ್ ಮಹಲ್ ಅನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಲಲಿತ್ ಮಹಲ್ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ವಿಭಿನ್ನ ಪ್ರತಿಭಟನೆಯ ಮೂಲಕ ಗಮನ ಸೆಳೆಯುವ ವಾಟಾಳ್ ನಾಗರಾಜ್ ಶನಿವಾರ ಲಲಿತ್ ಮಹಲ್ ಎದುರು ಚಾಪೆಯನ್ನು ಹಾಸಿ ಅದರ ಮೇಲೆ ಮಲಗುವ ಮೂಲಕ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು ಲಲಿತ ಮಹಲ್ ಪಾರಂಪರಿಕ, ಐತಿಹಾಸಿಕ ಕಟ್ಟಡವಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

Vatal stages protest against govt

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Opposing the government’s proposal to privatise the Lalit Mahal Palace Hotel, an iconic heritage building in the city, Kannada chaluvali leader Vatal Nagaraj staged a unique protest in front of Lalit Mahal Palace Hotel on Saturday.
Please Wait while comments are loading...