ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಮಹಾನಗರ ಪಾಲಿಕೆ ಚುನಾವಣೆ : ಪ್ರತಾಪ್ ಸಿಂಹ ಹೇಳಿದ್ದೇನು ?

By ಯಶಸ್ವಿನಿ ಎಂ.ಕೆ
|
Google Oneindia Kannada News

ಮೈಸೂರು, ಸೆಪ್ಟೆಂಬರ್. 3: ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 22 ಸ್ಥಾನಗಳನ್ನು ಪಡೆದಿದ್ದು, ಇದು ನಮ್ಮ ಪಕ್ಷದ ಎಲ್ಲರ ಸಾಧನೆ ಎಂದು ಸಂಸದ ಪ್ರತಾಪ್ ಸಿಂಹ ಸಂತಸ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆ ಫಲಿತಾಂಶ: ಗೆದ್ದಿದ್ದು ಯಾರು? ಬಿದ್ದಿದ್ದು ಯಾರು?!ಸ್ಥಳೀಯ ಸಂಸ್ಥೆ ಫಲಿತಾಂಶ: ಗೆದ್ದಿದ್ದು ಯಾರು? ಬಿದ್ದಿದ್ದು ಯಾರು?!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಐದು ಕ್ಷೇತ್ರದಲ್ಲಿ ನಾವು ಗೆಲ್ಲಬಹುದಿತ್ತು. ಆದರೆ ನಮ್ಮ ಬಂಡಾಯ ಅಭ್ಯರ್ಥಿಗಳಿಂದ ಸ್ವಲ್ಪ ಹಿನ್ನೆಡೆ ಆಗಿದೆ. ಆದರೂ ಇದೇ ಮೊದಲ ಬಾರಿಗೆ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಇನ್ನೆರಡು ದಿನಗಳಲ್ಲಿ ಮೈತ್ರಿ ಕುರಿತು ಮಾತುಕತೆ ನಡೆಯಲಿದೆ ಎಂದು ತಿಳಿಸಿದ್ದಾರೆ.

 ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ

ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದ್ದರೂ ನಮಗೆ ಮೈಸೂರಿನ ಜನ ಬೆಂಬಲ ನೀಡಿದ್ದಾರೆ. ಬಿಜೆಪಿಯ ಬಂಡಾಯ ಅಭ್ಯರ್ಥಿ ಒಂದು ಕಡೆ ಗೆಲವು ಸಾಧಿಸಿದ್ದಾರೆ. ಹೀಗಾಗಿ ಬಿಜೆಪಿ ಒಟ್ಟು 23 ಸ್ಥಾನಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಒಟ್ಟಿಗೆ ಅಧಿಕಾರ ನಡೆಸುತ್ತಿರುವ ಸಂದರ್ಭದಲ್ಲೂ ಗೆದ್ದಿರುವುದು ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲೇ ಉತ್ತಮವಾದ ಸಾಧನೆಯಾಗಿದೆ ಎಂದರು.

What does Pratap simha say about Mysore Mahanagara Palike Election?

ಪಾಲಿಕೆಯಲ್ಲಿ ಈ ಹಿಂದೆ ಇದ್ದ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಆ ನಂತರ ಮಾತನಾಡುತ್ತೇನೆ. ಅವರ ಜೊತೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಸಂದರ್ಭ ಬಂದಾಗ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಆದರೆ ಮೈಸೂರಿನಲ್ಲಿ ನಮ್ಮ ಸಾಧನೆ ಸಮಾಧಾನ ತಂದಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

English summary
MP Pratap Simha Said that BJP won 22 seats in Mahanagara Palike Election. This is the performance of our party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X