ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'2018ರ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ'

|
Google Oneindia Kannada News

Recommended Video

Karnataka Elections 2018 : Siddaramaiah Will Contest From Chamundeshwari Assembly Constituency

ಮೈಸೂರು, ಅಕ್ಟೋಬರ್ 04 : 'ಇದು ನನ್ನ ಪಾಲಿಗೆ ಕೊನೆಯ ಚುನಾವಣೆ. ನನಗೆ ರಾಜಕೀಯ ಜನ್ಮ ಹಾಗೂ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಮಂಗಳವಾರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೂಟಗಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಇದು ನನ್ನ ಪಾಲಿನ ಕೊನೆಯ ಚುನಾವಣೆ' ಎಂದು ಹೇಳಿದರು.

'ಕೈ' ನಾಯಕರ ಸಭೆಯಲ್ಲಿ ವಿಧಾನಸಭಾ ಚುನಾವಣೆಗೆ ರಣತಂತ್ರ'ಕೈ' ನಾಯಕರ ಸಭೆಯಲ್ಲಿ ವಿಧಾನಸಭಾ ಚುನಾವಣೆಗೆ ರಣತಂತ್ರ

'2013ರ ಚುನಾವಣೆಯೇ ನನ್ನ ಪಾಲಿಗೆ ಕೊನೆಯದ್ದು ಎಂದು ಘೋಷಿಸಿದ್ದೆ. ಆದರೆ, ಹೈಕಮಾಂಡ್ ಸೂಚನೆ ಮೇರೆಗೆ ಮತ್ತೆ ಸ್ಪರ್ಧಿಸುತ್ತಿದ್ದೇನೆ. ನನ್ನ ನೇತೃತ್ವದಲ್ಲಿಯೇ ಈ ಬಾರಿಯ ಚುನಾವಣೆ ನಡೆಯಲಿದೆ. ಮುಂದೆ ಯಾರು ಕೇಳಿಕೊಂಡರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬಿ.ಎಸ್.ಯಡಿಯೂರಪ್ಪ ಚುನಾವಣೆಗೆ ಸ್ಪರ್ಧಿಸುವ ಕ್ಷೇತ್ರ ಅಂತಿಮ?ಬಿ.ಎಸ್.ಯಡಿಯೂರಪ್ಪ ಚುನಾವಣೆಗೆ ಸ್ಪರ್ಧಿಸುವ ಕ್ಷೇತ್ರ ಅಂತಿಮ?

'ಡಿಸೆಂಬರ್ 15ರಿಂದ ಒಂದು ತಿಂಗಳ ಕಾಲ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಲಿದ್ದೇನೆ. ಸಂಕ್ರಾಂತಿ ಹಬ್ಬದ ತನಕ ಪ್ರತಿ ಕ್ಷೇತ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲಿದ್ದೇನೆ' ಎಂದು ಸಿದ್ದರಾಮಯ್ಯ ತಿಳಿಸಿದರು.

ಕ್ಷೇತ್ರ ತೊರೆಯಬೇಕಾದರೆ ಕಣ್ಣೀರು ಹಾಕಿದ್ದೆ

ಕ್ಷೇತ್ರ ತೊರೆಯಬೇಕಾದರೆ ಕಣ್ಣೀರು ಹಾಕಿದ್ದೆ

'ನನಗೆ ಅಳು ಬರುವುದೇ ಇಲ್ಲ. ತಂದೆ-ತಾಯಿ ಸಾವನ್ನಪ್ಪಿದಾಗ ದುಖಃವಾಗಿ ಕಣ್ಣೀರು ಹಾಕಿದ್ದೆ. ನಂತರ 2008ರಲ್ಲಿ ಚಾಮುಂಡೇಶ್ವರಿ ಕ್ಷೇತ್ರ ತೊರೆದು ವರುಣಾಕ್ಕೆ ಹೋಗಬೇಕಾದಾಗ ಕಣ್ಣೀರು ಹಾಕಿದ್ದೆ. ರೇವಣಸಿದ್ದಯ್ಯ ಬಿಜೆಪಿ ಸೇರಿದಾಗ ವರುಣಾ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿ ಇರಲಿಲ್ಲ. ಆದ್ದರಿಂದ, ನಾನೇ ಸ್ಪರ್ಧಿಸಬೇಕಾಯಿತು' ಎಂದರು.

'ಇಲ್ಲಿ ಎರಡು ಬಾರಿ ಸೋತಿದ್ದೇನೆ'

'ಇಲ್ಲಿ ಎರಡು ಬಾರಿ ಸೋತಿದ್ದೇನೆ'

'1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದಾಗ ಚಾಮುಂಡೇಶ್ವರಿ ಕ್ಷೇತ್ರದ ಜನರು ನನ್ನ ಬೆಂಬಲಕ್ಕೆ ನಿಂತರು. 2006ರ ಉಪ ಚುನಾವಣೆಯಲ್ಲಿ ಗೆಲ್ಲಿಸಿದ್ದೀರಿ. ಇಲ್ಲಿ ಎರಡು ಬಾರಿ ಸೋತಿದ್ದೇನೆ. ಅದಕ್ಕೆ ನಾನು ಮಾಡಿದ ತಪ್ಪುಗಳು ಕಾರಣ. ಆದರೆ, ಈ ಬಾರಿ ಮತ್ತೆ ನನ್ನ ಕೈಹಿಡಿಯುತ್ತೀರಿ ಎಂಬ ವಿಶ್ವಾಸವಿದೆ. ನಾನು ಬದುಕಿರುವ ತನಕ ಈ ಕ್ಷೇತ್ರವನ್ನು ಮರೆಯುವುದಿಲ್ಲ' ಎಂದರು.

'ರಾಜಕೀಯ ಜನ್ಮ ಹಾಗೂ ಮರುಜನ್ಮ ನೀಡಿದ ಕ್ಷೇತ್ರ'

'ರಾಜಕೀಯ ಜನ್ಮ ಹಾಗೂ ಮರುಜನ್ಮ ನೀಡಿದ ಕ್ಷೇತ್ರ'

'ನನಗೆ ರಾಜಕೀಯ ಜನ್ಮ ಹಾಗೂ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತೇನೆ. ನನ್ನ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ನಡೆಯಲಿದೆ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

'ಜೈಲಿಗೆ ಹೋಗಿ ಬಂದಿರುವ ಗಿರಾಕಿ'

'ಜೈಲಿಗೆ ಹೋಗಿ ಬಂದಿರುವ ಗಿರಾಕಿ'

'ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರು ಖಾಲಿ ಬುಟ್ಟಿ ಇಟ್ಟುಕೊಂಡು ಹಾವಿದೆ ಎಂದು ಬೆದರಿಸುತ್ತಿದ್ದಾರೆ. ಅವರು ಜೈಲಿಗೆ ಹೋಗಿ ಬಂದಿರುವ ಗಿರಾಕಿ. ಅವರ ಮನೆಯಲ್ಲಿ ಹೆಗ್ಗಣ ಸತ್ತಿದ್ದರೂ ನೊಣ ಸತ್ತಿದೆ ಎಂದು ಕೂಗಾಡುತ್ತಿದ್ದಾರೆ' ಎಂದು ಲೇವಡಿ ಮಾಡಿದರು.

ಕೊನೆ ಚುನಾವಣೆ ಎಂದು ಹೇಳಿದ್ದರು

ಕೊನೆ ಚುನಾವಣೆ ಎಂದು ಹೇಳಿದ್ದರು

'2013ರ ಚುನಾವಣೆಯೇ ನನ್ನ ಪಾಲಿಗೆ ಕೊನೆಯದ್ದು' ಎಂದು ಹಿಂದೆ ಸಿದ್ದರಾಮಯ್ಯ ಹೇಳಿದ್ದರು. ಆದರೆ, 'ಹೈಕಮಾಂಡ್ ಸೂಚನೆ ಮೇರೆಗೆ ಮತ್ತೆ ಸ್ಪರ್ಧಿಸುತ್ತಿದ್ದೇನೆ. ಮುಂದೆ ಯಾರು ಕೇಳಿಕೊಂಡರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕಳೆದ ಬಾರಿ ವರುಣಾದಿಂದ ಸ್ಪರ್ಧಿಸಿದ್ದರು

ಕಳೆದ ಬಾರಿ ವರುಣಾದಿಂದ ಸ್ಪರ್ಧಿಸಿದ್ದರು

2013ರ ಚುನಾವಣೆಗೆ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 84,385 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದ ಕೆಜೆಪಿ ಅಭ್ಯರ್ಥಿ ಕಾಪು ಸಿದ್ದಲಿಂಗ ಸ್ವಾಮಿ 54,744 ಮತಗಳನ್ನು ಪಡೆದಿದ್ದರು.

English summary
Karnataka Chief minister Siddaramaiah announced that, 2018 is the my last election and i will contest for election form Chamundeshwari assembly constituency, Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X