ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಎಸ್‌ವೈಗೆ ಸಂಕಷ್ಟ:ಗುಂಡ್ಲುಪೇಟೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ?

ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಸಂದರ್ಭದಲ್ಲೇ ಮೃತ ರೈತನ ಮನೆಗೆ ಹಣ ಸಹಾಯ ಮಾಡಿರುವುದು ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 8 : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಹೊಸ ಸಂಕಷ್ಟ ಎದುರಾಗಿದ್ದು ಗುಂಡ್ಲುಪೇಟೆಯಲ್ಲಿ ಉಪಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದೆ.

ಹೊಸಹಳ್ಳಿ ಗ್ರಾಮದಲ್ಲಿ ಸಾಲಭಾದೆ ಯಿಂದ ಆತ್ಮಹತ್ಯೆಗೆ ಶರಣಾದ ರೈತ ಚಿಕ್ಕಶೆಟ್ಟಿ ವಡ್ಡರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ಹಣ ನೀಡಿರುವ ವಿಡಿಯೋವೊಂದು ಬಹಿರಂಗಗೊಂಡಿದೆ. ಈ ರೀತಿ ಹಣ ನೀಡುವುದು ಸ್ಪಷ್ಟವಾಗಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗುತ್ತದೆ.

Yedyurappa in controvery for violating election code of conduct in Gundlupete

ರೈತನ ಮನೆಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಇತರ ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದ ಯಡಿಯೂರಪ್ಪ ಅವರು ಹಣವನ್ನು ನೀಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಅಲ್ಲದೆ ಮಾಧ್ಯಮಗಳ ಮುಂದೆಯೂ 1 ಲಕ್ಷ ರೂಪಾಯಿ ಪರಿಹಾರ ಪಕ್ಷದ ವತಿಯಿಂದ ನೀಡಿರುವುದಾಗಿ ಹೇಳಿದ್ದಾರೆ.

ಹಣ ನೀಡುವ ವೇಳೆ ಬೆಂಬಲಿಗರು ಎಲ್ಲರೂ ಕ್ಯಾಮರಾಗಳನ್ನು ಆಫ್ ಮಾಡಿ ಎಂದಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಚುನಾವಣಾ ಆಯೋಗ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದನ್ನು ಎದುರು ನೋಡಲಾಗುತ್ತಿದೆ.

English summary
Former CM BS Yedyurappa is in new controversy as new allegation rose agaist him saying that he distributed some money in one of the farmer's home who was demised recently in Gundlupete where byelection code of conduct is is existance.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X