ಹುಟ್ಟುಹಬ್ಬದ ಚಾಕೊಲೇಟ್ ತಿಂದು 11 ವಿದ್ಯಾರ್ಥಿಗಳು ಅಸ್ವಸ್ಥ

ಮೈಸೂರು, ನವೆಂಬರ್ 1: ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಹುಟ್ಟುಹಬ್ಬದ ಅಂಗವಾಗಿ ನೀಡಿದ ಚಾಕೊಲೇಟ್ ಸೇವಿಸಿದ ವಿದ್ಯಾರ್ಥಿಗಳು ವಾಂತಿ, ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿರುವ ಘಟನೆ ಗುರುವಾರ ಮೈಸೂರಿನಲ್ಲಿ ನಡೆದಿದೆ.

ನಗರದ ವಿದ್ಯಾರಣ್ಯಪುರಂನಲ್ಲಿರುವ ನಳಂದ ಆಂಗ್ಲ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಜೆಎಲ್ ಬಿ ರಸ್ತೆಯಲ್ಲಿರುವ ರಾಮಕೃಷ್ಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ದಾಖಲಾಗಿದ್ದ 11 ಮಂದಿ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

11 Students Fall Sick After Eating Birthday Chocolate In Mysuru

ಶಾಲೆಯ ಐದನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಹುಟ್ಟುಹಬ್ಬದ ಪ್ರಯುಕ್ತ ಸಹಪಾಠಿಗಳಿಗೆ ಚಾಕೊಲೇಟ್ ತಂದಿದ್ದು, ತರಗತಿಯಲ್ಲಿದ್ದ 31 ಮಂದಿ ವಿದ್ಯಾರ್ಥಿಗಳಿಗೂ ನೀಡಿದ್ದಾನೆ. ಮತ್ತೊಂದು ವಿಭಾಗದಲ್ಲಿದ್ದ ಆಪ್ತ ಸ್ನೇಹಿತರಿಗೂ ಚಾಕೊಲೇಟ್ ನೀಡಿದ್ದಾನೆ. ತರಗತಿ ವೇಳೆ ತಿನ್ನಲು ಅವಕಾಶವಿರದ ಕಾರಣ ವಿದ್ಯಾರ್ಥಿಗಳು ಮಧ್ಯಾಹ್ನದ ಊಟದ ಸಮಯದಲ್ಲಿ ತಿಂದು ಮತ್ತೆ ತರಗತಿಗೆ ಹಾಜರಾಗಿದ್ದಾರೆ. ಆ ಸಮಯ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಸುಸ್ತು, ಆಯಾಸದಿಂದ ನಿತ್ರಾಣಗೊಂಡಿದ್ದಾರೆ. ಒಂದಿಬ್ಬರು ಮಕ್ಕಳು ವಾಂತಿ ಕೂಡ ಮಾಡಿಕೊಂಡಿದ್ದಾರೆ. ತರಗತಿಯಲ್ಲಿದ್ದ ಮಕ್ಕಳು ಏಕಾಏಕಿ ಅಸ್ವಸ್ಥರಾಗಿರುವುದನ್ನು ಕಂಡು ಆತಂಕಗೊಂಡು ಶಿಕ್ಷಕರು ಶಾಲಾ ವಾಹನದಲ್ಲಿ ಅಸ್ವಸ್ಥಗೊಂಡ 11 ಮಕ್ಕಳನ್ನು ಶಾಲಾ ವಾಹನದ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಒಂದೆರಡು ಗಂಟೆಗಳ ಬಳಿಕ ಮಕ್ಕಳ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಸಂಜೆ ಹೊತ್ತಿಗೆ ಎಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗಿದೆ.

11 Students Fall Sick After Eating Birthday Chocolate In Mysuru

ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಚಿದಂಬರಂ ಮತ್ತು ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ ಮುಖ್ಯ ಶಿಕ್ಷಕಿ ಸುಕನ್ಯಾ ಕುಮಾರಿ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಟ್ಟುಹಬ್ಬ ಆಚರಿಸಿಕೊಂಡ ವಿದ್ಯಾರ್ಥಿ ತನ್ನ ಸಹಪಾಠಿಗಳಿಗೆ ನೀಡಿದ ಚಾಕೊಲೇಟ್ ಗಳನ್ನು ಸಂಗ್ರಹಿಸಿದ ಅವರು ಚಾಕೊಲೇಟ್ ಖರೀದಿಸಿದ ಅಂಗಡಿಯಿಂದಲೂ ಚಾಕೊಲೇಟ್ ವಶಪಡಿಸಿಕೊಂಡು ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+