ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಮತ್ತೆ ಶತಕ ದಾಟಿದ ಕೊರೊನಾ ವೈರಸ್ ಪ್ರಕರಣಗಳು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 20: ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಭಾನುವಾರ ಒಂದೇ ದಿನ 110 ಜನರಲ್ಲಿ ಸೋಂಕು ದೃಢಪಟ್ಟಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1624ಕ್ಕೆ ಏರಿದ್ದರೆ, ಮೃತರ ಸಂಖ್ಯೆ 70 ಕ್ಕೆ ಏರಿಕೆಯಾಗಿದೆ. ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇದ್ದು ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 110ಕ್ಕೇರಿದೆ.

ಮೈಸೂರು ಜಿಲ್ಲೆಯಲ್ಲಿ 130 ಕೊರೊನಾ ವೈರಸ್ ಸೋಂಕು ಪ್ರಕರಣ ಪತ್ತೆ: ಹಲವು ಪ್ರದೇಶ ಸೀಲ್ ಡೌನ್ಮೈಸೂರು ಜಿಲ್ಲೆಯಲ್ಲಿ 130 ಕೊರೊನಾ ವೈರಸ್ ಸೋಂಕು ಪ್ರಕರಣ ಪತ್ತೆ: ಹಲವು ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ 956 ಸಕ್ರಿಯ ಪ್ರಕರಣಗಳಿದ್ದು, ಭಾನುವಾರ 23 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 31,419 ಸ್ಯಾಂಪಲ್ಸ್ ಟೆಸ್ಟ್ ಮಾಡಲಾಗಿದ್ದು, 29,624 ನೆಗೆಟಿವ್ ಬಂದಿದೆ.

110 New Coronavirus Infection Cases Reported In Mysuru On Sunday

ಐಸೋಲೇಟೆಡ್ ಕೋವಿಡ್ ಆಸ್ಪತ್ರೆಯಲ್ಲಿ 242 ಮಂದಿ, ಐಸೋಲೇಟೆಡ್ ಕೋವಿಡ್ ಹೆಲ್ತ್ ಕೇರ್ ನಲ್ಲಿ 77, ಐಸೋಲೇಟೆಡ್ ಕೋವಿಡ್ ಕೇರ್ ಸೆಂಟರ್ ನಲ್ಲಿ 145 ಮಂದಿ, ಖಾಸಗಿ ಆಸ್ಪತ್ರೆಯ ಐಸೋಲೇಶನ್ ನಲ್ಲಿ 157 ಮಂದಿ ಹಾಗೂ 335 ಮಂದಿ ಮನೆಯಲ್ಲಿಯೇ ಐಸೋಲೇಶನ್ ನಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಹೇಳಿದೆ.

English summary
The number of coronavirus infections in the Mysuru district has been increasing day by day, with 110 people infected in a single day on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X