• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರ್ಷದೊಳಗೆ 202 ಕೋಟಿ ರೂ ವೆಚ್ಚದಲ್ಲಿ 117 ಪೊಲೀಸ್‌ ಠಾಣೆ ನಿರ್ಮಾಣ: ಆರಗ ಜ್ಞಾನೇಂದ್ರ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 1: ವರ್ಷದೊಳಗೆ 202 ಕೋಟಿ ರೂ.ವೆಚ್ಚದಲ್ಲಿ ರಾಜ್ಯದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶನಿವಾರ ಮೈಸೂರು ಜಿಲ್ಲಾ ಪೊಲೀಸ್ ಡಿಎಆರ್ ಘಟಕದ ಆಡಳಿತ ಕಚೇರಿ ಹಾಗೂ ಶಸ್ತ್ರಗಾರ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರಿಗೆ 2025ರ ವೇಳೆಗೆ ಸುಮಾರು 11 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಮೂಲಕ ನೆಮ್ಮದಿಯಿಂದ ಬದುಕಲು ಸರಕಾರ ಅನುಕೂಲ ಮಾಡಿಕೊಡುತ್ತದೆ. ಜೊತೆಗೆ ಕರ್ತವ್ಯಕ್ಕೆ ಕಚೇರಿಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

RSS ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ: ಬಸವರಾಜ ಬೊಮ್ಮಾಯಿRSS ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ: ಬಸವರಾಜ ಬೊಮ್ಮಾಯಿ

ಪೊಲೀಸರ ಕೈಗೆ ಶಸ್ತ್ರಾಸ್ತ್ರಗಳನ್ನು ನೀಡಿ, ಬೆರಳಚ್ಚು ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉತ್ತಮ ವಾತಾವರಣ ನಿರ್ಮಿಸಲಾಗುವುದು. ಈ ಮೂಲಕ ಅಪರಾಧಿಗಳನ್ನು ತಕ್ಷಣ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಜೊತೆಗೆ ನ್ಯಾಯಾಲಯಕ್ಕೆ ಹೋಗುವ ಪ್ರಕರಣಗಳ ಸಂಖ್ಯೆಯನ್ನ ಸಹ ಕಡಿಮೆ ಮಾಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಕಾರಾಗೃಹಕ್ಕೆ ಭೇಟಿ

ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಮೈಸೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ, ಕಾರಾಗೃಹದ ಎಫ್‌ಎಂ ಬಾನುಲಿ ಕೇಂದ್ರವನ್ನು ವೀಕ್ಷಿಸಿದರು. ಬಾನುಲಿ ಪ್ರಸಾರ ಕೇಂದ್ರದ ಮೂಲಕ, ಕಾರಾಗೃಹ ವಾಸಿಗಳನ್ನು ಉದ್ದೇಶಿಸಿ ಮಾತನಾಡಿ, ಕಾರಾಗೃಹವನ್ನು ಸುಧಾರಣೆಯ ಹಾಗೂ ಮನ ಪರಿವರ್ತನೆಯ ತಾಣವೆಂದು, ಸ್ವೀಕರಿಸಿ, ಹಾಗೂ ಇಲ್ಲಿನ ಹೊರತಾಗಿಯೂ ಬದುಕು ಇದೆ ಎಂಬ ವಾಸ್ತವವನ್ನು ಅರಿತು ಕೊಳ್ಳಿ ಎಂದು, ಹೇಳಿದ ಸಚಿವರು, ಎಲ್ಲರಿಗೂ ಶುಭ ಹಾರೈಸಿದರು.

ಕಾರಾಗೃಹ ದಲ್ಲಿರುವ, ಕೈ ಮಗ್ಗ ಘಟಕ, ಕೌಶಲ್ಯ ಅಭಿವೃದ್ದಿ ಕೇಂದ್ರ, ಹೊಲಿಗೆ ತರಭೇತಿ ಘಟಕಕ್ಕೂ ಭೇಟಿ ನೀಡಿದ ಸಚಿವರು, ಸಜಾ ಬಂಧಿ ಕೈದಿಗಳ ಜತೆ ಸಂಭಾಷಣೆ ನಡೆಸಿದರು. ಕಾರಾಗೃಹದ ಒಳಗಿರುವ, ಕೈದಿಗಳ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿದ ಸಚಿವರನ್ನು, ಕೈದಿಗಳು, ಸುಶ್ರಾವ್ಯ ವಾಗಿ ಹಾಡುವುದರ ಮೂಲಕ ಬರ ಮಾಡಿಕೊಂಡರು.

ಸಜಾ ಬಂಧಿ ಕೈದಿಗಳು, ಮಹಿಳಾ ಸಜಾಬಂಧಿಗಳನ್ನು ಸಚಿವರು ಅವರ ಅಹವಾಲುಗಳನ್ನು ಸ್ವೀಕರಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದ ಸಚಿವ, ಕಾರಾಗೃಹದ ಅಡುಗೆ ವಿಭಾಗಕ್ಕೆ ಭೇಟಿ ನೀಡಿದ ಸಚಿವರು, ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು, ಸೂಚಿಸಿದರು.

ನಂತರ ಜೈಲು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಜೈಲಿನ ಒಳಗಡೆ, ಮಾದಕ ವಸ್ತುಗಳು, ಮೊಬೈಲ್ ಫೋನ್ ಬಳಕೆ ವಿರುದ್ಧ ತೀವ್ರ ನಿಗಾ ವಹಿಸಬೇಕು ಎಂದು, ನಿರ್ದೇಶನ ನೀಡಿದರು.

English summary
117 police station built in across Karnataka in the cost of 202 crore within next year, said Home minister Araga Jnanendra in mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X