Get Updates
Get notified of breaking news, exclusive insights, and must-see stories!

Yoga Day: ಮೈಸೂರು ಅರಮನೆ ಮುಂದೆ 12 ಸಾವಿರ ಜನರಿಂದ ಯೋಗಾಭ್ಯಾಸ

ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶುಕ್ರವಾರ ಬೆಳಗ್ಗೆ ಅರಮನೆ ಆವರಣದ ಮುಂಭಾಗ ಸುಮಾರು 12 ಸಾವಿರಕ್ಕೂ ಹೆಚ್ಚು ಮಂದಿ ಯೋಗಾಭ್ಯಾಸ ಮಾಡಿ ಸಂಭ್ರಮಿಸಿದರು.

ನಗರದ ಅರಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ನಡೆದ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಿದರು. ಯೋಗಗುರು ಡಾ.ಪಿ.ಎನ್.ಗಣೇಶ್ ಕುಮಾರ್ ಅವರು 45 ನಿಮಿಷಗಳ ಯೋಗ ಹೇಳಿಕೊಟ್ಟರು.

12 000 People Practice Yoga in Front of Mysuru Palace

ನಂತರ ಮಾತನಾಡಿದ ಡಾ.ಎಚ್.ಸಿ.ಮಹದೇವಪ್ಪ, ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ ಎಂದು ತಿಳಿಸಿದರು.

ಯೋಗದ ನಿಯಮಗಳನ್ನು ಪಾಲಿಸುವಲ್ಲಿ ಭಾರತ ಪ್ರಪಂಚದ ಇತರ ರಾಷ್ಟ್ರಗಳಿಗಿಂತ ಮುಂಚೂಣಿಯಲ್ಲಿದೆ. ಯೋಗ ಮಾಡುವುದರಿಂದ ನಮ್ಮ ದೇಹದ ನಿಯಂತ್ರಣ, ಅಂಗಾಂಗಗಳ ಪರಿಪೂರ್ಣ ಮತ್ತು ಕ್ರಮಬದ್ಧವಾದ ಕಾರ್ಯ ಚಟುವಟಿಕೆ, ಮನಸ್ಸಿನ ಸಮತೋಲನ ಆರೋಗ್ಯದ ವೃದ್ಧಿ, ಶಿಸ್ತು ಬದ್ಧವಾದ ಜೀವನ ನಡೆಸಲು ಅತ್ಯಂತ ಪ್ರೇರಣೆಯಾಗಿರುವುದು ಆರೋಗ್ಯ ಎಂದರು.

ಯೋಗವನ್ನು ನಿಯಮ ಬದ್ಧವಾಗಿ ಪಾಲನೆ ಮಾಡುವುದರಿಂದ ಶಿಸ್ತು ಬದ್ಧ ಜೀವನ ನಡೆಸಿ, ಆರೋಗ್ಯದ ವೃದ್ಧಿ ಮಾಡಿಕೊಂಡು ಸಮಾಜ ಹಾಗೂ ಕುಟುಂಬವನ್ನು ಲವಲವಿಕೆಯಿಂದ ನೋಡಿಕೊಂಡು ಹೋಗಬಹುದು. ಕಳೆದು ಬಾರಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ರೈಸ್ ಕೋರ್ಸ್ ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಾಡಿ ವಿಶ್ವ ಗಿನ್ನಿಸ್ ದಾಖಲೆಯನ್ನು ಮೈಸೂರು ಮಾಡಿತ್ತು ಎಂದರು. ನಿರ್ದಿಷ್ಟವಾದ ದೇಹದ ಸಮಸ್ಯೆಗಳಿಗೆ ನಿರ್ದಿಷ್ಟವಾದ ಯೋಗ ಕ್ರಿಯೆಗಳನ್ನು ಮಾಡಿದ್ದಲ್ಲಿ ಆರೋಗ್ಯಯುತವಾಗಿರಲು ಸಾಧ್ಯ ಎಂಬುದನ್ನು ವೈದ್ಯಕೀಯ ಶಾಸ ಹಾಗೂ ತಜ್ಞರು ಹೇಳಿದ್ದಾರೆ ಎಂದರು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ಮೈಸೂರಿನಲ್ಲಿ ಯೋಗ ದಿನಾಚರಣೆಯನ್ನು ಪ್ರತಿ ವರ್ಷವೂ ಬಹಳ ದೊಡ್ಡ ಮಟ್ಟದಲ್ಲಿ ಆಚರಣೆ ಮಾಡುತ್ತಾ ಬಂದಿದ್ದೇವೆ. ಭಾರತದಲ್ಲಿ ಆಧುನಿಕ ಕಾಲದ ಯೋಗ ಮೈಸೂರಿನಿಂದ ಸೃಷ್ಟಿಯಾಗಿದೆ ಎಂದರೆ ತಪ್ಪಿಲ್ಲ. ಅಂದಿನ ಕಾಲದ ಶ್ರೀತತ್ವ ನಿಧಿಯಲ್ಲಿ 108 ಆಸನಗಳನ್ನು ದಾಖಲೆ ಮಾಡಿ ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಯೋಗ ಅಭ್ಯಾಸ ಮೈಸೂರಿನಲ್ಲಿ ಶುರುವಾಗಿತ್ತು ಎಂದರು.

ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಕಳೆದ ಎರಡು ವರ್ಷದ ಹಿಂದೆ ಮೈಸೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮ್ಮೊಂದಿಗೆ ಯೋಗ ಮಾಡಿದ್ದು ನೆನಪಿಗೆ ಬರುತ್ತದೆ. ಯೋಗ ಎಂದರೆ ಮೈಸೂರು ಎಂದರೆ ಯೋಗ. ಅನೇಕ ಪ್ರಥಮಗಳಿಗೆ ಮೈಸೂರು, ಮಹಾರಾಜರು ಮೈಸೂರು ಅರಮನೆ, ಕಾರಣವಾಗಿದೆ. ಇದನ್ನು ಇಂದು ನೆನೆದುಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಮಾತನಾಡಿ, ಪತಂಜಲಿ ಮಹಾಮುನಿಗಳಿಂದ ಯೋಗ ಪ್ರಪಂಚಕ್ಕೆ ಪರಿಚಯವಾಗಿದೆ. ಜಾಗತಿಕ ಮಟ್ಟದಲ್ಲಿ ಯೋಗದ ಮಹತ್ವ ಅರಿತು ಪಾಶ್ಚಿಮಾತ್ಯ ದೇಶಗಳು ಯೋಗದ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ. ಯೋಗಕ್ಕೆ ಭಾರತದ ಕೊಡುಗೆ ಜೊತೆಗೆ ಮೈಸೂರು ಸಹ ಯೋಗದ ಭೂಪಟದಲ್ಲಿ ತನ್ನದೇ ಆದ ಛಾಪುವನ್ನು ಮೂಡಿಸಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+