ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಸಿಟಿವ್ ನ್ಯೂಸ್: ಮೈಸೂರಿನ 14 ಹಳ್ಳಿಗಳು ಕೊರೊನಾ ಮುಕ್ತ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 2: ಮೈಸೂರು ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಗ್ರಾಮಗಳಿಗೂ ಕೋವಿಡ್-19 ವ್ಯಾಪಕವಾಗಿ ಹರಡಿರುವ ನಡುವೆಯೂ ಮೈಸೂರು ತಾಲ್ಲೂಕಿನ 14 ಗ್ರಾಮಗಳು ಕೊರೊನಾದಿಂದ ಮುಕ್ತವಾಗಿದೆ.

ಮೈಸೂರು ತಾಲ್ಲೂಕು ವ್ಯಾಪ್ತಿಗೆ ಒಳಪಡುವ 37 ಗ್ರಾಮ ಪಂಚಾಯತಿಗಳಲ್ಲಿ 11 ಗ್ರಾಮ ಪಂಚಾಯತಿಗೆ ಸೇರುವ 14 ಗ್ರಾಮಗಳಲ್ಲಿ ಇದುವರೆಗೂ ಒಂದೂ ಕೋವಿಡ್ ಪ್ರಕರಣ ದಾಖಲಾಗದೆ ಕೊರೊನಾ ಮುಕ್ತವಾಗಿದ್ದು, ಇದು ಇತರೆ ಹಳ್ಳಿಗಳಿಗೆ ಮಾದರಿಯಾಗಿದೆ.

ಮೈಸೂರು ತಾಲ್ಲೂಕಿನ ಮಾದಗಳ್ಳಿ, ರಾಯನಕೆರೆ, ಕಟ್ಟೆಹುಂಡಿ, ಕುಂಬ್ರಳ್ಳಿ, ಚಿಕ್ಕೇಗೌಡನಹುಂಡಿ, ಕೃಷ್ಣಪುರ, ರಾಮನಹಳ್ಳಿ, ಗುಡುಮಾದನಹಳ್ಳಿ, ಇನಮ್ ಉತ್ತನಹಳ್ಳಿ, ಲಕ್ಷ್ಮೀಪುರ, ಮಾಕನಹುಂಡಿ, ಹಂಚ್ಯಾಹುಂಡಿ, ಹೊಸಹುಂಡಿ, ಗುರುಕಾರಪುರ ಗ್ರಾಮಗಳಿಗೆ ಈವರೆಗೂ ಕೊರೊನಾ ಸೋಂಕು ಸುಳಿದಿಲ್ಲ.

ಕಡ್ಡಾಯವಾಗಿ ಮಾಸ್ಕ್ ಧರಿಸುವುದು

ಕಡ್ಡಾಯವಾಗಿ ಮಾಸ್ಕ್ ಧರಿಸುವುದು

ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಜೊತೆಗೆ ಗ್ರಾಮಸ್ಥರು ಸಹ ಸ್ವಯಂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ ಫಲವಾಗಿ ಈ ಗ್ರಾಮಗಳು ಕೋವಿಡ್ ಸೋಂಕಿನಿಂದ ದೂರ ಉಳಿದಿರುವುದು ವಿಶೇಷ. ಇನ್ನೂ ಈ ಗ್ರಾಮಗಳ ಜನರು ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗಿಯಾಗದೆ ಇರುವುದು, ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಹೋಗುವುದು, ವ್ಯಕ್ತಿಗಳಿಂದ ಅಂತರ ಕಾಪಾಡಿಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಅನೇಕ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆ ಮಾಡಿದ ಪರಿಣಾಮ ಈ ಗ್ರಾಮಗಳಲ್ಲಿ ಕೊರೊನಾ ಸೋಂಕು ಕಾಲಿಟ್ಟಿಲ್ಲ.

ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ತಪಾಸಣೆ

ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ತಪಾಸಣೆ

ಅಲ್ಲದೇ ಗ್ರಾಮ ಪಂಚಾಯತಿ ವತಿಯಿಂದ ಕೋವಿಡ್ ಹರಡದಂತೆ ಮುಂಜಾಗ್ರತಾ ಕ್ರಮವಹಿಸಲು ಡಂಗುರ ಸಾರುವ ಮೂಲಕ ಗ್ರಾಮಗಳಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಸ್ವತಃ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಪಿಡಿಒ ಮತ್ತು ಸಿಬ್ಬಂದಿ ಮನೆ ಮನೆ ಬಾಗಿಲಿಗೆ ಹೋಗಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಪ್ರತಿಯೊಬ್ಬರು ಮಾಸ್ಕ್ ಕಡ್ಡಾಯವಾಗಿ ಧರಿಸಿ, ದೈಹಿಕ ಅಂತರ ಕಾಪಾಡುವುದು ಮತ್ತು ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡುತ್ತಿದ್ದಾರೆ. ಒಂದೆರಡು ಹಳ್ಳಿಗಳಲ್ಲಿ ಮಾತ್ರ ಲಕ್ಷಣ ಕಾಣಿಸಿಕೊಂಡ ಎರಡು ಮಂದಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.

ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ

ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ

ಈ ಗ್ರಾಮಗಳಲ್ಲಿ ಆರೋಗ್ಯ ಸಿಬ್ಬಂದಿ ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಅತ್ಯಂತ ಚುರುಕಾಗಿ ಕೆಲಸ ಮಾಡುತ್ತಿದ್ದು, ಪ್ರತಿನಿತ್ಯ ಗ್ರಾಮದ ಮನೆಮನೆಗೆ ತೆರಳಿ ಪಲ್ಸ್ ಆಕ್ಸಿಮೀಟರ್, ಥರ್ಮಲ್ ಸ್ಕ್ರಿನಿಂಗ್‌ನಿಂದ ಆರೋಗ್ಯ ಸ್ಥಿರತೆ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಸೋಂಕಿನ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಗ್ರಾಮ ಪಂಚಾಯತಿಗಳ ಶ್ರಮ

ಗ್ರಾಮ ಪಂಚಾಯತಿಗಳ ಶ್ರಮ

ಜನರು ಮುಂಜಾಗ್ರತಾ ಕ್ರಮ ಅನುಸರಿಸುವುದರ ಜೊತೆಗೆ, ಗ್ರಾಮ ಪಂಚಾಯತಿಗಳ ಶ್ರಮದಿಂದ ಸೋಂಕು ಹರಡದಂತೆ ನೋಡಿಕೊಳ್ಳಲಾಗಿದೆ. ಇಲ್ಲಿಯವರೆಗೆ ಯಾರಿಗೂ ಸೋಂಕು ತಗುಲಿಲ್ಲ ಎಂಬುದು ಗಮನಾರ್ಹ ವಿಷಯ ಎಂದು ಮೈಸೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್ ರಮೇಶ್ ತಿಳಿಸಿದ್ದಾರೆ.

English summary
Despite the wide spreading of Coronavirus, 14 villages of Mysuru Taluk are declared as free from Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X