ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್.ಡಿ.ಕೋಟೆ; ದುಬಾರಿ ಮೊಬೈಲ್‌ ಕೊಡಿಸದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 22: ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕ್ರಿಮಿನಾಶಕ ಸೇವಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾನೆ. ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಹತ್ತನೇ ತರಗತಿ ಓದುತ್ತಿರುವ 15 ವರ್ಷದ ಆದಿತ್ಯ ಆತ್ಮಹತ್ಯೆಗೆ ಶರಣಾದ ಬಾಲಕ. ಈತನ ಅಕ್ಕನಿಗೆ ಪೋಷಕರು ಹೆಚ್ಚಿನ ಬೆಲೆಯ ಸ್ಮಾರ್ಟ್‌ ಫೋನ್‌ ಕೊಡಿಸಿದ್ದರು. ನಂತರ ಆದಿತ್ಯನು ತನಗೂ ದುಬಾರಿ ಫೋನ್‌ ಕೊಡಿಸಬೇಕೆಂದು ಹಟ ಹಿಡಿದಿದ್ದನು. ಆದರೆ ಪೋಷಕರು ಮೊಬೈಲ್ ಕೊಡಿಸಲು ನಿರಾಕರಿಸಿದ್ದರು.

Mysuru HD Kote Student Commits Suicide For The Reason Of Costly Mobile Phone

 ಶಾಲೆಗೆ ಪೋಷಕರನ್ನು ಕರೆದು ತಾ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಶಾಲೆಗೆ ಪೋಷಕರನ್ನು ಕರೆದು ತಾ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಇದರಿಂದ ನೊಂದ ಬಾಲಕ ಮನೆಯಲ್ಲಿ ಬೆಳೆಗಳಿಗೆ ಸಿಂಪಡಿಸಲು ತಂದಿಟ್ಟಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ. ಕ್ರಿಮಿನಾಶಕ ಸೇವಿಸಿದ್ದ ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆದಿತ್ಯ ಸಾವನ್ನಪ್ಪಿದ್ದಾನೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A student in hd kote commits suicide for the simple reason that his parents did not get him a mobile phone
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X