ಮೈಸೂರು ಕಾರಾಗೃಹದಿಂದ 19 ಕೈದಿಗಳಿಗೆ ಬಿಡುಗಡೆ ಭಾಗ್ಯ ?
ಮೈಸೂರು, ಜನವರಿ 19: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದಲ್ಲಿರುವ ಕೇಂದ್ರ ಕಾರಾಗೃಹದಿಂದ ಸನ್ನಡತೆ ಆಧಾರದಲ್ಲಿ 19 ಕೈದಿಗಳ ಬಿಡುಗಡೆಗೆ ಶಿಫಾರಸ್ಸು ಮಾಡಲಾಗಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಸನ್ನಡತೆ ಆಧಾರದಲ್ಲಿ ರಾಜ್ಯಾದ್ಯಂತ ಖೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.
ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ಕೈದಿಗಳಲ್ಲಿ 109 ಮಂದಿಯನ್ನು ಈ ಬಾರಿಯ ಗಣ ರಾಜ್ಯೋತ್ಸವ ದಿನ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ಸನ್ನಡತೆ ಹಿನ್ನೆಲೆ ಹೊಂದಿರುವ 19 ಕೈದಿಗಳ ಬಿಡುಗಡೆಗೆ ಅನುಮತಿ ಕೋರಿ ನಗರದ ಕೇಂದ್ರ ಕಾರಾಗೃಹದ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಅಂತಿಮವಾಗಿ ಸರ್ಕಾರ ಎಷ್ಟು ಮಂದಿಗೆ ಬಿಡುಗಡೆ ಭಾಗ್ಯ ಒದಗಿಸಲಿದೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಅಂತಿಮ ತೀರ್ಮಾನ ಸರ್ಕಾರಕ್ಕೆ ಸೇರಿದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications