ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ವರ್ಷಕ್ಕೆ ಮೈಸೂರಿನ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡು ವಿತರಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 27: ಅರಮನೆ ನಗರಿ ಮೈಸೂರು ನೂತನ ವರ್ಷಕ್ಕೆ ಸಜ್ಜಾಗುತ್ತಿದೆ. ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಮೊದಲ ದಿನ ಭಕ್ತರಿಗೆ ವಿತರಿಸಲು ಬರೋಬ್ಬರಿ 2 ಲಕ್ಷ ತಿರುಪತಿ ಮಾದರಿಯ ಲಡ್ಡುಗಳನ್ನು ತಯಾರಿಸುವ ಕೆಲಸ ಸಾಗಿದೆ.

ಮೈಸೂರಿನ ವಿಜಯನಗರದಲ್ಲಿರುವ ಯೋಗಾನರಸಿಂಹಸ್ವಾಮಿ ದೇಗುಲ ಸುದರ್ಶನ ನರಸಿಂಹ ಕ್ಷೇತ್ರವೆಂದೇ ಹೆಸರುವಾಸಿ. 1994 ರಿಂದಲೂ ವರ್ಷದ ಮೊದಲ ದಿನ ಒಂದು ಸಾವಿರ ಲಡ್ಡುಗಳನ್ನು ವಿತರಿಸಲಾಗುತ್ತಿತ್ತು. ನಂತರದ ವರ್ಷಗಳಲ್ಲಿ ಅದಕ್ಕಿಂತಲೂ ಹೆಚ್ಚಿನ ಪ್ರಮಾಣದ ಲಡ್ಡುಗಳನ್ನು ವಿತರಿಸುವ ಮೂಲಕ ನೂತನ ವರ್ಷವನ್ನು ಬರ ಮಾಡಿಕೊಳ್ಳಲಾಗಿತ್ತು.

ಕೊಡಚಾದ್ರಿ ಬೆಟ್ಟದ ಮೇಲೆ ಹೊಸ ವರ್ಷಾಚರಣೆಗೆ ಬೀಳಬಹುದು ಬ್ರೇಕ್ಕೊಡಚಾದ್ರಿ ಬೆಟ್ಟದ ಮೇಲೆ ಹೊಸ ವರ್ಷಾಚರಣೆಗೆ ಬೀಳಬಹುದು ಬ್ರೇಕ್

2 Lakh Laddus Will Be Distributed On New Year In Yoganarasimha Swamy Temple In Mysuru

ಈ ಬಾರಿ ಎರಡು ಲಕ್ಷ ಲಡ್ಡುಗಳನ್ನು ವಿತರಿಸಲು ತಯಾರಿ ನಡೆಯುತ್ತಿದ್ದು, ಡಿಸೆಂಬರ್ 31ಕ್ಕೆ ಲಡ್ಡುಗಳ ತಯಾರಿ ಅಂತ್ಯಗೊಳ್ಳಲಿದೆ. 50 ಮಂದಿ ನುರಿತ ಬಾಣಸಿಗರು ಲಡ್ಡುಗಳನ್ನು ತಯಾರಿಸುತ್ತಿದ್ದಾರೆ. ಲಡ್ಡುಗಳಿಗಾಗಿ 50 ಕ್ವಿಂಟಾಲ್ ಕಡಲೆ ಹಿಟ್ಟು, 100 ಕ್ವಿಂಟಾಲ್ ಸಕ್ಕರೆ, 4,000 ಲೀಟರ್ ಎಣ್ಣೆ, 200 ಕೆ.ಜಿ ಗೋಡಂಬಿ, 200 ಕೆ.ಜಿ ಒಣದ್ರಾಕ್ಷಿ, 100 ಕೆ.ಜಿ ಬಾದಾಮಿ, 200 ಕೆ.ಜಿ ಡೈಮಂಡ್ ಸಕ್ಕರೆ, 500 ಕೆ.ಜಿ ಬೂರಾ ಸಕ್ಕರೆ, 10 ಕೆ.ಜಿ ಪಿಸ್ತಾ, 20 ಕೆ.ಜಿ ಏಲಕ್ಕಿ, 20 ಕೆ.ಜಿ ಜಾಕಾಯಿ ಮತ್ತು ಜಾಪತ್ತೆ, 5 ಕೆ.ಜಿ ಕರ್ಪೂರ, 100 ಕೆ.ಜಿ ಲವಂಗ ಬಳಸಲಾಗಿರುವುದಾಗಿ ಯೋಗನರಸಿಂಹಸ್ವಾಮಿ ದೇಗುಲದ ಸಂಸ್ಥಾಪಕ ಶ್ರೀ ಭಾಷ್ಯಂ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

English summary
Palace City Mysuru is gearing up for a new year. The work of making 2 lakh Tirupati-style laddus for distribution to devotees on the first day of the New Year at Sri Yoganarasimhaswamy Temple is in progress,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X